Advertisement
ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಕಾಂಗ್ರೆಸ್ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ನಿರ್ಮಿಸಿತು. ಅವೆಲ್ಲವನ್ನೂ ಮಾರುತ್ತಿದ್ದಾರೆ. 70 ವರ್ಷಗಳಲ್ಲಿ ನಾವು ಏನು ಮಾಡಿದ್ದೇವೆ ಎಂದು ಅವರು ಕೇಳುತ್ತಾರೆ. ಅವರು ಕೇವಲ 7 ವರ್ಷಗಳಲ್ಲಿ 70 ವರ್ಷಗಳ ಪ್ರಯತ್ನವನ್ನು ವ್ಯರ್ಥ ಮಾಡಿದ್ದಾರೆ, ”ಎಂದರು.
Related Articles
Advertisement
“ದಲಿತರು, ನೇಕಾರರು, ಒಬಿಸಿಗಳು, ಬಡವರು, ಅಲ್ಪಸಂಖ್ಯಾತರು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರತಿನಿತ್ಯ ಜನರ ಮೇಲೆ ಹಲ್ಲೆ ನಡೆಸುತ್ತಿದೆ” ಎಂದು ಗಾಂಧಿ ಹೇಳಿದರು.
ಯುಪಿ ಚುನಾವಣೆಗಾಗಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಸಹಯೋಗದಲ್ಲಿ ಕೆಲಸ ಮಾಡಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು.
“ಎಸ್‌ಪಿ ಮತ್ತು ಬಿಎಸ್‌ಪಿಯವರು ಕಾಂಗ್ರೆಸ್ ಬಿಜೆಪಿಯೊಂದಿಗೆ ಶಾಮೀಲಾಗಿ ಕೆಲಸ ಮಾಡುತ್ತಿದೆ ಎಂದು ಹೇಳುತ್ತಾರೆ. ನಾನು ಆರೋಪಿಸುವವರಿಗೆ ಕೇಳಲು ಬಯಸುತ್ತೇನೆ – ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮ್ಮೊಂದಿಗೆ ಏಕೆ ನಿಲ್ಲಬಾರದು. ಕಾಂಗ್ರೆಸ್ ಮಾತ್ರ ಹೋರಾಡುತ್ತಿದೆ ಎಂದು ಯಾಕೆ ಹೇಳುತ್ತೀರಿ. ನಾನು ಬೇಕಾದರೆ ಸಾಯುತ್ತೇನೆ ಆದರೆ ಬಿಜೆಪಿಯೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಹೊಂದುವುದಿಲ್ಲ” ಎಂದು ಅವರು ಪ್ರತಿಪಾದಿಸಿದರು.