Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ದೇಶದ ಜನರಲ್ಲಿ ತಪ್ಪು ಭಾವನೆ ಹುಟ್ಟು ಹಾಕುತ್ತಿದೆ. ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಅನಾವಶ್ಯಕವಾಗಿ ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಇವರ ಕುತಂತ್ರ ಮತ್ತು ಕುಮ್ಮಕ್ಕಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗುತ್ತಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೇಶದಲ್ಲಿ ಪೌರತ್ವ ಕಾಯ್ದೆ ಜಾರಿಯಾಗಬೇಕು ಎಂದು ಹೇಳಿದ್ದರು. ಅವರ ಮಾತಿಗೂ ಮನ್ನಣೆ ನೀಡದ ಕಾಂಗ್ರೆಸ್ ಇದೀಗ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಶಾಸಕ ಸೋಮಶೇಖರ ರೆಡ್ಡಿ ಅವರು ಈ ವಿಚಾರದಲ್ಲಿ ಕಾಂಗ್ರೆಸ್ ಕುತಂತ್ರ ಮಾಡುತ್ತಿರುವುದನ್ನು ಸಹಿಸಲಾಗದೆ ಆವೇಶದಲ್ಲಿ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಕೆಲವು ಅಲ್ಪಸಂಖ್ಯಾಕ ಮುಖಂಡರ ಹೇಳಿಕೆಗಳಿಂದ ರೋಸಿ ಹೋದ ರೆಡ್ಡಿ ಅವರು ಕೊನೆಯಲ್ಲಿ ರೊಚ್ಚಿಗೆದ್ದು ಆಕ್ರೋಶದ ಮಾತನ್ನಾಡಿದ್ದಾರೆ. ಕಾಂಗ್ರೆಸ್‌ನ ಹಾಲಿ ಶಾಸಕರೊಬ್ಬರು ಪೌರತ್ವ ಕಾಯ್ದೆ ತಿದ್ದುಪಡಿಯಾದರೆ ಮಂಗಳೂರು ಹೊತ್ತಿ ಉರಿಯುತ್ತದೆ ಎಂದು ಹೇಳಿದ್ದರು. ಅವರ ಹೇಳಿಕೆ ಬಗ್ಗೆ ಮೌನ ವಹಿಸಿರುವ ಕಾಂಗ್ರೆಸ್‌ನವರು ರೆಡ್ಡಿಯವರ ಮಾತಿಗೆ ವಿರೋಧ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.