Advertisement

Congress ಸಚಿವ ಸಂಪುಟವೇ ಮಂಗಳೂರಿನಲ್ಲಿ !

12:54 AM Feb 18, 2024 | Team Udayavani |

ಮಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹಸಚಿವ ಡಾ| ಜಿ. ಪರಮೇಶ್ವರ್‌ ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಸಚಿವರು ಮಂಗಳೂರಿಗೆ ಆಗಮಿಸುವ ಮೂಲಕ ರಾಜ್ಯದ ಸಚಿವ ಸಂಪುಟವೇ ಶನಿವಾರ ನಗರದಲ್ಲಿತ್ತು.

Advertisement

ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಕಂಡುಬರುವ ಚಿತ್ರಣ ಇಂದು ಮಂಗಳೂರಿನಲ್ಲಿ ಕಂಡುಬಂತು. ಮುನ್ನಾದಿನವೇ ಬಂದು ನಗರದ ವಿವಿಧ ಹೊಟೇಲ್‌ಗ‌ಳಲ್ಲಿ ತಂಗಿದ್ದ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕೆಲವು ಸಚಿವರು ತಮ್ಮ ಇಲಾಖಾ ವ್ಯಾಪ್ತಿಯ ಸಭೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಗಜ್ಯೋತಿ ಬಸವಣ್ಣ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಗರಾಭಿವೃದ್ಧಿ ಸಚಿವ ಬಿ. ಸುರೇಶ್‌ ಮಹಾನಗರ ಪಾಲಿಕೆಯಲ್ಲಿ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿವಿಧ ವಿಭಾಗಗಳ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು. ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಆಹಾರ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಜತೆಗೆ ಇತರ ಕೆಲವು ಸಚಿವರೂ ತಮ್ಮ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಶುಕ್ರವಾರ ರಾತ್ರಿಯೇ ನಗರಕ್ಕೆ ಆಗಮಿಸಿದ್ದರು. ಶನಿವಾರ ಕಂಬಳ, ಬ್ರಹ್ಮಕಲಶೋತ್ಸವ ಸಹಿತ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next