Advertisement

10ಕ್ಕೆ ಕಾಂಗ್ರೆಸ್‌ನಿಂದ ಭಾರತ್‌ ಬಂದ್‌

06:00 AM Sep 07, 2018 | |

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೆ.10 (ಸೋಮವಾರ)ರಂದು ದೇಶಾದ್ಯಂತ ಬಂದ್‌ಗೆ ಕಾಂಗ್ರೆಸ್‌ ಕರೆ ನೀಡಿದೆ. 

Advertisement

ಜತೆಗೆ ಇತರ ಪ್ರತಿಪಕ್ಷಗಳ ನಾಯಕರು, ಸಂಘ-ಸಂಸ್ಥೆಗಳು ಪಕ್ಷದ ನಿರ್ಧಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದೆ.  ಹೊಸದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲಾ ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಿಯಂತ್ರಿಸಲು ಮೋದಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತೈಲೋತ್ಪನ್ನಗಳ ಬೆಲೆ ಏರಿಕೆಯಿಂದ ಕೇಂದ್ರ ಸರಕಾರ 11 ಲಕ್ಷ ಕೋಟಿ ರೂ. ಸಂಗ್ರಹಿಸಿದೆ. ಇದೊಂದು “ಇಂಧನ ಲೂಟಿ’ (ಫ್ಯೂಯೆಲ್‌ ಲೂಟ್‌) ಎಂದು ಸುಜೇìವಾಲಾ ಬಣ್ಣಿಸಿದ್ದಾರೆ. ಹೀಗಾಗಿ, ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲೆ ಅಬಕಾರಿ ಸುಂಕ (ಎಕ್ಸೆ„ಸ್‌ ಡ್ನೂಟಿ), ರಾಜ್ಯ ಸರಕಾರಗಳ ವ್ಯಾಪ್ತಿಯಲ್ಲಿ ವ್ಯಾಟ್‌ ತಗ್ಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಭಾಷಣ ಮತ್ತು ಭರವಸೆ ನೀಡುವುದರಲ್ಲಿಯೇ ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next