Advertisement

ಜವಾಹರಲಾಲ್‌ ನೆಹರೂ ಫೋಟೋ ಬಗ್ಗೆ ಪಶ್ಚಿಮ ಬಂಗಾಳದಲ್ಲೂ ವಿವಾದ

09:48 PM Aug 16, 2022 | Team Udayavani |

ಕೋಲ್ಕತ: ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಫೋಟೋವನ್ನು ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಸೇರಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಕೆಂಡ ಕಾರಿದೆ.

Advertisement

ಮಮತಾ ಅವರು ಮಹಾತ್ಮ ಗಾಂಧಿ ಸೇರಿ ಹತ್ತಾರು ಸ್ವಾತಂತ್ರ್ಯ ಹೋರಾಟಗಾರರಿರುವ ಫೋಟೋವನ್ನು ಟ್ವಿಟರ್‌ನಲ್ಲಿ ತಮ್ಮ ಡಿಪಿಯನ್ನಾಗಿ ಬದಲಾಯಿಸಿದ್ದಾರೆ. ಆದರೆ ಆ ಫೋಟೋದಲ್ಲಿ ನೆಹರೂ ಅವರಿಲ್ಲ. ಇದನ್ನು ಕಾಂಗ್ರೆಸ್‌ ಖಂಡಿಸಿದ್ದು, ಮಮತಾ ಅವರು ಉದ್ದೇಶಪೂರ್ವಕವಾಗಿಯೇ ನೆಹರೂ ಫೋಟೋ ಬಿಟ್ಟಿದ್ದಾರೆ ಎಂದು ದೂರಿದೆ.

ಹಾಗೆಯೇ ಪುಟಾಣಿ ಬಾಲಕಿಯೊಬ್ಬಳು ಬರೆದಿರುವ ನೆಹರೂ ಫೋಟೋವನ್ನು ಹಂಚಿಕೊಂಡಿದ್ದು, “ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷವು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಈ ಪುಟಾಣಿಯಿಂದ ಪಾಠ ಕಲಿಯಬೇಕಿದೆ’ ಎಂದು ಕಾಂಗ್ರೆಸ್‌ ಟೀಕಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next