ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಮನೆಯ ಮೇಲೆ ಕಾಂಗ್ರೆಸ್ ಮುತ್ತಿಗೆ ಕರೆ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ನಗರದ ಬಸವನಹಳ್ಳಿಯಲ್ಲಿರುವ ಸಿ.ಟಿ.ರವಿ ಮನೆಗೆ ಬಿಜೆಪಿ ಕಾರ್ಯಕರ್ತರು, ಪೊಲೀಸರ ಸರ್ಪಗಾವಲು ಹಾಕಲಾಗಿದೆ.
ಇದನ್ನೂ ಓದಿ:ಸೆ.5 ರಂದು ರೈತರ ಮಕ್ಕಳ ಶಿಷ್ಯವೇತನ ಬಿಡುಗಡೆಗೆ ಚಾಲನೆ: ಸಿಎಂ ಬೊಮ್ಮಾಯಿ
ರಾಜ್ಯ ಯುವ ಮೋರ್ಚಾ ಅಧ್ಯಕ್ಷ ರಕ್ಷಾರಾಮಯ್ಯ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಇಂದು ಮುತ್ತಿಗೆಗೆ ಕರೆ ನೀಡಿದ್ದರು. ಮಧ್ಯಾಹ್ನದ ನಂತರ ಮುತ್ತಿಗೆಗೆ ಕಾಂಗ್ರೆಸ್ ಕರೆ ನೀಡಿತ್ತು. ಹೀಗಾಗಿ ಕಾಂಗ್ರೆಸ್ ಮುತ್ತಿಗೆಗೆ ಪ್ರತಿರೋಧ ನೀಡಲು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ.
ಇದನ್ನೂ ಓದಿ: ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ
ಸಿ.ಟಿ.ರವಿ ಮನೆ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.