Advertisement
ಶನಿವಾರ ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮುಳಬಾಗಿಲು ನಗರದ ಬಾಬಾ ಹೈದರ್‌ವಲ್ಲಿ ದರ್ಗಾಕ್ಕೆ ಸಿಎಂ, ಡಿಸಿಎಂ ಸಹಿತ ಕಾಂಗ್ರೆಸ್ ಮುಖಂಡರು ಭೇಟಿ ನೀಡಲಿದ್ದು, ನಂತರ ಡಾ| ಅಂಬೇಡ್ಕರ್ ವೃತ್ತದಲ್ಲಿ ಡಾ| ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
Related Articles
ಸಾಮಾನ್ಯವಾಗಿ ಕಾಂಗ್ರೆಸ್ ಹಿಂದಿನಿಂದಲೂ ಕೋಲಾರದ ಕುರುಡುಮಲೆ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವುದರೊಂದಿಗೇ ಚುನಾವಣ ಪ್ರಚಾರ ಕಾರ್ಯವನ್ನು ಆರಂಭಿಸುತ್ತದೆ. ಕಳೆದ ವಿಧಾನಸಭಾ ಚುನಾವಣೆ ವೇಳೆಯೂ ಇಲ್ಲಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗಿತ್ತು. ಉಳಿದ ರಾಜಕೀಯ ಪಕ್ಷಗಳು ಕೂಡ ಈ ಹಿಂದೆ ಕುರುಡುಮಲೆಗೆ ಪೂಜೆ ಸಲ್ಲಿಸಿಪ್ರಚಾರ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸ ಬಹುದು.
Advertisement
ಯಾವುದೇ ಚುನಾವಣೆಗಳು ಬಂದರೂ ರಾಜಕಾರಣಿಗಳು ಕೂಡುಮಲೆ ವಿನಾಯಕನ ದೇಗುಲಕ್ಕೆ ಭೇಟಿ ನೀಡಿ ಪ್ರಥಮ ಪೂಜೆ ಸಲ್ಲಿಸುವುದು ವಾಡಿಕೆ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಎಸ್.ಎಂ.ಕೃಷ್ಣ ಇಲ್ಲಿ ಪೂಜೆ ಸಲ್ಲಿಸುವ ಮೂಲಕ ಪಾಂಚಜನ್ಯ ಯಾತ್ರೆ ಕೈಗೊಂಡು ಚುನಾವಣೆ ಕಹಳೆ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದರು.