Advertisement

ಕಾಂಗ್ರೆಸ್‌ ಅಭ್ಯರ್ಥಿಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ದೂರು

10:55 AM Apr 10, 2017 | |

ಬೆಂಗಳೂರು: ನಂಜನಗೂಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರು ಕಾಂಗ್ರೆಸ್‌ ಚಿಹ್ನೆಯಿರುವ ಶಲ್ಯ ಹಾಕಿಕೊಂಡು ಮತದಾನ ಮಾಡಿದ್ದಲ್ಲದೆ, ಮತದಾನದ ವೇಳೆ ಕ್ಷೇತ್ರದಲ್ಲಿ ಮತದಾರರಲ್ಲದ ಕಾಂಗ್ರೆಸ್‌ ಮುಖಂಡರೂ ಓಡಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಅಭ್ಯರ್ಥಿತನ ಅಸಿಂಧುಗೊಳಿಸುವಂತೆ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Advertisement

ಭಾನುವಾರ ಮತದಾನ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ (ಏ. 7) 5 ಗಂಟೆಯೊಳಗೆ ಮತದಾರರಲ್ಲದವರು ಕ್ಷೇತ್ರ ತೊರೆಯಬೇಕು ಎಂಬ ನಿಯಮವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಕೆ.ಮರಿಗೌಡ ಮತದಾನದ ವೇಳೆ ನಂಜನಗೂಡು ಕ್ಷೇತ್ರದಲ್ಲಿ ಪ್ರತ್ಯಕ್ಷರಾಗಿ ಓಡಾಡಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರು ಕಾಂಗ್ರೆಸ್‌ ಚಿಹ್ನೆಯಿರುವ ಶಲ್ಯ ಹಾಕಿಕೊಂಡು ಮತದಾನ ಮಾಡಿದ್ದು, ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಕಳಲೆ ಕೇಶವಮೂರ್ತಿ ಅವರ ಅಭ್ಯರ್ಥಿತನವನ್ನು ಅಸಿಂಧುಗೊಳಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಅಗ್ರಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next