Advertisement

ಚನ್ನಪಟ್ಟಣ: ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Advertisement

ಜಿಲ್ಲೆಯ 4ವಿಧಾನಸಭಾ ಕ್ಷೇತ್ರದ ಪೈಕಿ 3 ಕ್ಷೇತ್ರಕ್ಕೆ ಟಿಕೆಟ್‌ ಅಂತಿಮಗೊಳಿಸಲಾಗಿದ್ದು, ರಾಜ್ಯದಲ್ಲೇ ಹೈವೋಲ್ಟೇಜ್‌ ಕ್ಷೇತ್ರ ಎನಿಸಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಕೈ ಟಿಕೆಟ್‌ ಫೈನಲ್‌ ಮಾಡಿಲ್ಲ.

ವೈರಲ್‌: ಒಂದೆಡೆ ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ರಿಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದು, ಕೊನೆ ಕ್ಷಣದಲ್ಲಿ ಸಿಪಿವೈ ಕಾಂಗ್ರೆಸ್‌ ಸೇರ್ತಾರಾ ಎಂಬ ಪ್ರಶ್ನೆ ಹುಟ್ಟು ಹಾಕಿ ದರೆ, ಮತ್ತೂಂದೆಡೆ ಸ್ಥಳೀ ಯ ಕಾಂಗ್ರೆಸ್‌ ಕಾ ರ್ಯ ಕರ್ತರು ಸ್ವತಃ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಾದ ಡಿ.ಕೆ.ಶಿವಕುಮಾರ್‌ ಅವರೇ ಇಲ್ಲಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಪೋಸ್ಟರ್‌ ಜಾಲತಾ ಣದಲ್ಲಿ ವೈರಲ್‌ ಆಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಫೈನಲ್‌ ಆಗದಿ ರುವುದು ಅನೇಕ ಸಾಧ್ಯ ತೆಗಳನ್ನು ತೆರೆದಿಟ್ಟಿದೆ ಎಂಬ ಮಾತು ಕ್ಷೇತ್ರದಲ್ಲಿ ಕೇಳಿಬರುತ್ತಿವೆ.

ರಮ್ಯಾ ಕಣಕ್ಕಿಳಿಸುವ ಚರ್ಚೆ: ಸಿಪಿವೈಗೆ ಕೈ ನಾಯಕರು ಗಾಳ ಹಾಕುವ ಮೂಲಕ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರನ್ನು ಸುಲಭವಾಗಿ ಕಟ್ಟಿಹಾಕಬಹುದು ಎಂಬ ಹೊಸ ತಂತ್ರಗಾರಿಕೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದಾರೆ ಎಂಬ ಗುಸುಗುಸು ಹರಿದಾಡುತ್ತಿದೆ.

ಮತ್ತೂಂದು ಕಡೆ ನಟಿ ರಮ್ಯಾರನ್ನು ಕಣಕ್ಕಿಳಿಸುವ ಚರ್ಚೆಯೂ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಯೋಗೇಶ್ವರ್‌ ಕಳೆದ 2 ತಿಂಗಳಿಂದ ಚನ್ನ ಪಟ್ಟಣ ಪ್ರತಿ ಮನೆ ಮನೆಗೂ ಭೇಟಿ ನೀಡುವ ಮೂಲಕ ಸ್ವಾಭಿಮಾನಿ ಸಂಕಲ್ಪ ನಡೆ ಕಾರ್ಯಕ್ರಮದ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಈ ನಡುವೆ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ತಾರೆ ಎಂದು ಕಳೆದ ಹಲವು ತಿಂಗಳಿಂದ ಊಹಾಪೋಹ ಎದ್ದಿದೆ. ಇದಕ್ಕೆ ಪೂರಕವೆಂಬಂತೆ ಎಐಸಿಸಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಕಗ್ಗಂಟಾಗಿ ಉಳಿಸಿಕೊಳ್ಳಲಾಗಿದೆ.

Advertisement

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಯೋಗೇಶ್ವರ್‌ ಕಣಕ್ಕಿಳಿಸಿದರೆ ಕುಮಾರ ಸ್ವಾಮಿ ಅವರನ್ನು ಸುಲಭವಾಗಿ ಮಣಿಸಬ ಹುದು ಎಂಬ ಲೆಕ್ಕಾಚಾರ ದೊಂದಿಗೆ ಕಾಂಗ್ರೆಸ್‌ ಯೋಜನೆಯಾಗಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ತವರು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೊಸ ತಂತ್ರಗಾರಿಕೆ ಮಾಡಿದ್ದಾರೆ. ಯೋಗೇಶ್ವರ ಕಾಂಗ್ರೆಸ್‌ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅನ್ನು ಮತ್ತಷ್ಟು ಬಲಪಡಿಸುವ ಕೆಲಸಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ಅಲ್ಲದೇ, ಕೊನೆ ಕ್ಷಣದವರೆಗೂ ಕಾದು ನೋಡುವ ತಂತ್ರವನ್ನೂ ಅನುಸರಿಸುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.

“ಕೈ’ ಕೊಟ್ಟು ಹೊರೆ ಹೊತ್ತ ಪಂಚಮಿ ಪ್ರಸನ್ನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ತಮಗೇ ಖಚಿತ ಎಂದು ನಂಬಿದ್ದ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿ ಹಾಗೂ ಉದ್ಯಮಿ ಪಂಚಮಿ ಪ್ರಸನ್ನ ಪಿ.ಗೌಡ ಅವರು, ಕ್ಷೇತ್ರಾದ್ಯಂತ ಕಾಂಗ್ರೆಸ್‌ ಸಂಘಟನೆಯಲ್ಲಿ ತೊಡಗಿದ್ದರು. ಆದರೆ, ದಿಢೀರ್‌ ಬೆಳವಣಿಗೆಯಲ್ಲಿ ಮೈಸೂರಿನಲ್ಲಿ ನಡೆದ ಜೆಡಿಎಸ್‌ ಪಂಚರತ್ನ ಪಾದಯಾತ್ರೆ ಸಮಾರೋಪದಲ್ಲಿ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಅವರೊಂದಿಗೆ ಕಾಣಿಸಿಕೊಂಡ ಉದ್ಯಮಿ ಪ್ರಸನ್ನ ಪಿ.ಗೌಡ, ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ನಿಖರತೆ, ಖಚಿತತೆ ಇಲ್ಲ. ಜೆಡಿಎಸ್‌ ತತ್ವ ಸಿದ್ಧಾಂತ ಒಪ್ಪಿ ಯಾವುದೇ ಷರತ್ತಿ ಲ್ಲದೇ ಸೇರುತ್ತಿದ್ದೇನೆ. ಕಾಂಗ್ರೆಸ್‌ ಬಿಡಲು ಕಾರಣವೇನೆಂದು ಶೀಘ್ರದಲ್ಲೇ ತಿಳಿಸುತ್ತೇನೆಂದು ಹೇಳಿದ್ದಾರೆ.

ಕೈ ಹಿಡಿದರೆ ಸಿಪಿವೈಗೆ ಹೆಚ್ಚಿನ ಅನುಕೂಲ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ. ಇವರ ಬದ್ದ ವೈರಿ ಎಂದೇ ಪರಿಗಣಿಸಲ್ಪ ಟ್ಟಿರುವ ಯೋ ಗೇಶ್ವರ್‌ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಒಂದು ವೇಳೆ, ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂ ಡಲ್ಲಿ ಕುಮಾರಸ್ವಾಮಿ ಅವರಿಗೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂಬ ಅಭಿಪ್ರಾಯ ರಾಜಕೀಯ ವಿಶ್ಲೇಷಕರಿಂದ ಕೇಳಿ ಬಂದಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಸಮ್ಮಿಶ್ರ ಸರ್ಕಾರವನ್ನು ಉರುಳಿ ಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬ ಹಿನ್ನೆಲೆ ಸಿಪಿವೈ ಅವರಿಗೆ ಬಿಜೆಪಿ ಟಿಕೆಟ್‌ ದೊರೆತರೂ ಚನ್ನಪಟ್ಟಣದಲ್ಲಿ ಬಿಜೆಪಿ ಮತ ಅಷ್ಟೇನೂ ಇಲ್ಲ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ, ಸಾಂಪ್ರದಾಯಿಕ ಮತ, ವೈಯಕ್ತಿಕ ವರ್ಚಸ್ಸು , ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳಿಂದ ಅನುಕೂಲವಾಗಲಿದೆ ಎಂಬುದು ಜನತೆ ಅಭಿಪ್ರಾಯ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಸನ್ನ ಪಿ. ಗೌಡರ ಹೆಸರು ಫೈನಲ್‌ ಆಗಿತ್ತು. ಆದರೆ, ಅವರು ದಿಢೀರ್‌ ಬೇರೆ ಪಕ್ಷ ಸೇರಿದ್ದಾರೆ. ವರಿಷ್ಠರು ಗೆಲ್ಲಬಲ್ಲ ಅಭ್ಯರ್ಥಿಯನ್ನೇ ಆಯ್ಕೆ ಮಾಡಲಿದ್ದಾರೆ. ಅಭ್ಯರ್ಥಿ ಯಾರೇ ಆಗಲಿ ಗೆಲ್ಲಿಸುವುದು ನಮ್ಮ ಹೊಣೆ. ● ಎಸ್‌.ಗಂಗಾಧರ್‌, ಅಧ್ಯಕ್ಷರು, ರಾಮನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ರಾಮನಗರ, ಚನ್ನಪಟ್ಟಣ

ಮಾಗಡಿ ಜನ ಮನೆ ಮಗನಂತೆ ನೋಡುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರ ದಲ್ಲಿ ಕಾಂಗ್ರೆಸ್‌ ನಿಂದ ಯಾರೇ ಸ್ಪರ್ಧಿಸಿದರೂ ತಲೆ ಕೆಡಿಸಿಕೊ ಳ್ಳಲ್ಲ. ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ● ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ, ಹಾಲಿ ಶಾಸಕರು

  • ಎಂ.ಶಿವಮಾದು
Advertisement

Udayavani is now on Telegram. Click here to join our channel and stay updated with the latest news.

Next