Advertisement

ಕಾಂಗ್ರೆಸ್‌ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮ

01:47 PM Apr 18, 2023 | Team Udayavani |

ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಜೋಡೆತ್ತುಗಳಾಗಿ ಪಕ್ಷ ಸಂಘಟನೆಗೆ ಮುಂದಾಗುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಂ. ಕದಲೂರು ಉದಯ್‌ ತಿಳಿಸಿದರು.

Advertisement

ಪಟ್ಟಣದ ಶಿವಪುರದಲ್ಲಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಸಂಘಟಿಸಲು ಇಬ್ಬರು ನಾಯಕರು ಶ್ರಮಿಸುತ್ತಿದ್ದು, ಇವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವಾಗಬೇಕು. ಮಾಜಿ ಸಿಎಂ ಕೃಷ್ಣ ನಂತರ ಕಾಂಗ್ರೆಸ್‌ ಶಾಸಕರಿಲ್ಲದೆ ಕಾರ್ಯಕರ್ತರಿಗೆ ನೋವುಂಟಾಗಿದೆ. ಅಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇಬ್ಬರು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಶಕ್ತಿ ತುಂಬಿದ್ದು, ಇವರೂ ಸಹ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದರು.

ಸಮಾಜ ಸೇವೆಗೆಂದು ಆಗಮಿಸಿದ ತಮ್ಮನ್ನು ಕ್ಷೇತ್ರದ ಜನ ಸ್ವೀಕರಿಸುವ ಜತೆಗೆ ಕಾಂಗ್ರೆಸ್‌ ಪಕ್ಷದ ಸ್ಥಳೀಯ ಜಿಲ್ಲಾ ಮತ್ತು ರಾಜ್ಯ ಮಟ್ಟದ ನಾಯಕರು ಕಾಂಗ್ರೆಸ್‌ ಟಿಕೆಟ್‌ ನೀಡಿ ಆಶೀರ್ವದಿಸಿದ್ದು, ಮುಂದಿನ ದಿನಗಳಲ್ಲಿ ಮತದಾರರು ತಮ್ಮ ಕೈ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.

ಮತ ಕೇಳುವ ನೈತಿಕತೆ ಜೆಡಿಎಸ್‌ಗಿಲ್ಲ: ಶಾಸಕ ದಿನೇಶ್‌ ಗೂಳೀಗೌಡ ಮಾತನಾಡಿ, ಮುಂಬರುವ ವಿಧಾಸಭಾ ಚುನಾವಣೆ ವೇಳೆ ಮಂಡ್ಯ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳು ಮತ ಕೇಳುವ ಯಾವು ದೇ ನೈತಿಕತೆ ಹೊಂದಿಲ್ಲ. ಜಿಲ್ಲೆಯ ಸಮಸ್ಯೆಗಳಿಗೆ ಧನಿ ಎತ್ತದ ಜಾದಳ ಶಾಸಕರು, ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಶೂನ್ಯವಾಗಿದೆ. ಮದ್ದೂರು ಕ್ಷೇತ್ರ ಕಾಂಗ್ರೆಸ್‌ ವಶವಾಗಲಿದ್ದು, ಪಕ್ಷದ ಒಮ್ಮತದ ಅಭ್ಯರ್ಥಿ ಕೆ. ಎಂ.ಉದಯ್‌ ಗೆಲ್ಲುವ ಮೂಲಕ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ತಮ್ಮೊಟ್ಟಿಗೆ ಮಧು.ಜಿ. ಮಾದೇಗೌಡ ಸೇರಿದಂತೆ ಮೂರು ಮಂದಿಯೂ ಶ್ರಮಿಸುವುದಾಗಿ ಭರವಸೆ ನೀಡಿದರು.

ನಾಳೆ ನಾಮಪತ್ರ ಸಲ್ಲಿಕೆ: ಮಾಜಿ ಶಾಸಕ ಬಿ. ರಾಮಕೃಷ್ಣ ಮಾತನಾಡಿ ಏ.19ರ ಬುಧವಾರ ಕಾಂಗ್ರೆಸ್‌ ಪಕ್ಷದ ಸರ್ವಾನುಮತದ ಅಭ್ಯರ್ಥಿ ಯಾಗಿ ಕೆ.ಎಂ. ಉದಯ್‌ ನಾಮಪತ್ರ ಸಲ್ಲಿಸಲಿದ್ದು ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವಂತೆ ಮನವಿ ಮಾಡಿದರು.

Advertisement

ಶಾಸಕ ಮಧು.ಜಿ.ಮಾದೇಗೌಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು, ಮಾಜಿ ಉಪಾಧ್ಯಕ್ಷ ಇಮ್ತಿಯಾಜ್‌ ಉಲ್ಲಾಖಾನ್‌, ಮುಖಂಡ ಅಜ್ಜಹಳ್ಳಿ ರಾಮಕೃಷ್ಣ, ಕಿಸಾನ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್‌.ಮೋಹನ್‌ ಕುಮಾರ್‌ ಮಾತನಾಡಿದರು.

ಕೆಪಿಸಿಸಿ ಸದಸ್ಯ ಕದಲೂರು ರಾಮಕೃಷ್ಣ, ಗೆಜ್ಜಲಗೆರೆ ಗ್ರಾಪಂ ಅಧ್ಯಕ್ಷ ಹರೀಶ್‌, ಬೆಸಗರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶೇಖರ್‌, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಶ್‌, ಕೆಸ್ತೂರು ರಾಜಣ್ಣ, ವಿನಯ್‌ ರಾಮಕೃಷ್ಣ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next