ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಚಿಕ್ಕಬಳ್ಳಾಪುರ ಸೇರಿದಂತೆ ಕರ್ನಾಟಕದ ಮೂರೂ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸಲಾಗಿದೆ.
ಇಂದು ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು ಅದರಲ್ಲಿ ಕರ್ನಾಟಕದ ಮೂರೂ ಕ್ಷೇತ್ರ ಹಾಗೂ ರಾಜಸ್ಥಾನದ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
ಕರ್ನಾಟಕದ ಮೂರೂ ಕ್ಷೇತ್ರಗಳಲ್ಲಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು ಕೋಲಾರ ಕ್ಷೆತ್ರದ ಟಿಕೆಟ್ ಮಾತ್ರ ಬಾಕಿ ಉಳಿದಿದೆ.
ಅದರಂತೆ ಬಳ್ಳಾರಿಯಲ್ಲಿ ಇ ತುಕರಾಂ, ಚಾಮರಾಜನಗರದಲ್ಲಿ ಸಚಿವ ಎಚ್ಸಿ ಮಹಾದೇವಪ್ಪ ಅವರ ಪುತ್ರ ಸುನೀಲ್ ಬೋಸ್ಗೆ ಟಿಕೆಟ್ ನೀಡಲಾಗಿದ್ದು ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಂ.ಎಸ್.ರಾಮಯ್ಯನವರ ಮೊಮ್ಮಗ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಇದರೊಂದಿಗೆ ಕಾಂಗ್ರೆಸ್ ನ ಒಟ್ಟು 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಕೋಲಾರ ಒಂದು ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ.