Advertisement

ಸಿದ್ದರಾಮಯ್ಯ ಭೇಟಿಯಾದ ಬಸವಕಲ್ಯಾಣ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ

12:04 PM Mar 20, 2021 | Team Udayavani |

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಲ್ಲಮ್ಮ ನಾರಾಯಣರಾವ್ ಅವರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾದರು.

Advertisement

ಸಿದ್ದರಾಮಯ್ಯ ಅವರು ಅಭ್ಯರ್ಥಿ ಮಲ್ಲಮ್ಮ ಅವರಿಗೆ ಶುಭ ಹಾರೈಸಿದರು. ಮಾಜಿ ಸಚಿವರಾದ ಜಮೀರ್ ಅಹಮದ್, ಟಿ.ಬಿ. ಜಯಚಂದ್ರ, ಶಾಸಕರಾದ ಬೈರತಿ ಸುರೇಶ್ ಹಾಜರಿದ್ದರು.

ಇದನ್ನೂ ಓದಿ:ಗಾಜಿಯಾಬಾದ್: ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!

ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ನಿಧನದಿಂದ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next