Advertisement

LS Election: ಎ.3ಕ್ಕೆ ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ

03:33 PM Mar 26, 2024 | Team Udayavani |

ಮಂಗಳೂರು: ಬಿಜೆಪಿಯವರ ಲೆಕ್ಕಾಚಾರಗಳು ಏನೇ ಇರಲಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

Advertisement

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಬಿಜೆಪಿ ಮನೆಯೊಂದು ಮೂರು ಬಾಗಿಲಿನಂತಾಗಿದೆ. ಹಾಗಾಗಿ ಅವರ ಹೇಳಿಕೆ ನಮಗೆ ಮುಖ್ಯವಲ್ಲ , ನಾವು ಪೂರ್ಣ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಹೊಸ ಮುಖವನ್ನು ಕ್ಷೇತ್ರದಲ್ಲಿ ಇಳಿಸಿದ್ದು ಅನುಕೂಲವಾಗಲಿದೆ ಎಂದರು.

ಎ.3ರಂದು ನಾಮಪತ್ರ
ವಿಧಾನಸಭಾ ಚುನಾವಣೆ ಮುಗಿದ ಕೂಡಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡುವ ಕೆಲಸ ಮಾಡಲಾಗಿದೆ. ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಎ.3ಕ್ಕೆ ದ.ಕ. ಜಿಲ್ಲಾ ಲೋಕಸಭಾ ಸಭಾ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಎಲ್ಲಾ ಬ್ಲಾಕ್‌ಗಳಲ್ಲಿ ಮಾ. 27ರಿಂದ 30ರವರೆಗೆ ಬ್ಲಾಕ್, ವಿಧಾನಸಭಾ ಕ್ಷೇತ್ರಗಳ ಸಭೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ದಿನದಂದು ಮಂಗಳೂರು ಪುರಭವದಲ್ಲಿ ಸಮಾವೇಶ ನಡೆದು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ಬಳಿಕ ಎ.11ರಿಂದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಆರಂಭದಲ್ಲಿ ಸುಳ್ಯದಲ್ಲಿ, ಎ.12ರಂದು ಮೂಡಬಿದ್ರೆ, ಎ.13ರಂದು ಪುತ್ತೂರು, 14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳದಲ್ಲಿ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಎ.19ರಿಂದ ಎರಡನೆ ಸುತ್ತಿನ ಮತಯಾಚನೆ ನಡೆಯಲಿದೆ. ಪಕ್ಷದ ವತಿಯಿಂದ ಪ್ರತಿ ಕ್ಷೇತ್ರದ ಮಾಜಿ ಶಾಸಕರು, ಹಾಲಿ ಶಾಸಕರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಪ್ರಚಾರ ಕಾರ್ಯ ನಡೆಯಲಿದೆ. ಮಂಗಳೂರು ದಕ್ಷಿಣದಲ್ಲಿ ಮಾಜಿ ಶಾಸಕರಾದ ಜೆ.ಆರ್. ಲೋಬೋ, ಐವನ್ ಡಿ’ಸೋಜ ಅವರ ಉಸ್ತುವಾರಿಯಲ್ಲಿ, ಸುಳ್ಯದಲ್ಲಿ ಶಕುಂತಳಾ ಶೆಟ್ಟಿ ಮತ್ತು ಜಿ.ಕೃಷ್ಣಪ್ಪ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಯಲಿದೆ ಎಂದು ಅವರು ವಿವರಿಸಿದರು.

Advertisement

ಇದನ್ನೂ ಓದಿ: ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Advertisement

Udayavani is now on Telegram. Click here to join our channel and stay updated with the latest news.

Next