Advertisement

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಥಮ ಪಟ್ಟಿ ಪ್ರಕಟ

09:28 AM Sep 30, 2019 | Hari Prasad |

ಹೊಸದಿಲ್ಲಿ: ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರದ ವಿಧಾನ ಸಭೆ ಚುನಾವಣೆ ಮತ್ತು ಬಿಹಾರ, ರಾಜಸ್ಥಾನ, ಉತ್ತರಪ್ರದೇಶಗಳ ವಿವಿಧ ವಿಧಾನಸಭೆಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

Advertisement

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಅದು ಆರಂಭಿಕವಾಗಿ 51 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹೆಸರುಗಳನ್ನು ಅಂತಿಮಗೊಳಿಸಿರುವುದಾಗಿ ಎಐಸಿಸಿ ಸಮಿತಿ ಹೇಳಿದೆ. ವಿವಿಧ ರಾಜ್ಯಗಳಲ್ಲಿ, ಮಹಾರಾಷ್ಟ್ರದಲ್ಲಿ  ಅ.21ರಂದು ಮತದಾನ ನಡೆಯಲಿದ್ದು, ಅ.24ರಂದು ಚುನಾವಣೆ ಫ‌ಲಿತಾಂಶ ಪ್ರಕಟಗೊಳ್ಳಲಿದೆ.

ಮಹಾರಾಷ್ಟ್ರದ 288 ಸ್ಥಾನಗಳಿಗೆ ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿ ಒಪ್ಪಂದ ಮಾಡಿಕೊಂಡಿದ್ದು, ಅದರಂತೆ ತಲಾ 125 ಸ್ಥಾನಗಳಿಗೆ ಸ್ಪರ್ಧಿಸಲಿವೆ.

Advertisement

Udayavani is now on Telegram. Click here to join our channel and stay updated with the latest news.

Next