Advertisement

ಇಂದು ಕಾಂಗ್ರೆಸ್‌ ಪಟ್ಟಿ?

02:21 AM Mar 22, 2019 | |

ಬೆಂಗಳೂರು: ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ದೆಹಲಿಯಲ್ಲಿ ಪಕ್ಷದ ರಾಜ್ಯ ನಾಯಕರು ಸಾಮಾಜಿಕ ನ್ಯಾಯದ ಆಧಾರದಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದಪಡಿಸುವ ಕಸರತ್ತು ನಡೆಸಿದ್ದು, ಶುಕ್ರವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಚರ್ಚಿಸಿ, ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿನ ಸಭೆಗೂ ಮುನ್ನ ಕಾಂಗ್ರೆಸ್‌ ಪಾಲಿನ ಇಪ್ಪತ್ತು ಅಭ್ಯರ್ಥಿಗಳಲ್ಲಿ ಹಾಲಿ ಸಂಸದರ ಕ್ಷೇತ್ರಗಳನ್ನು ಹೊರತುಪಡಿಸಿ, ಜಾತಿ ಲೆಕ್ಕಾಚಾರದಲ್ಲಿ ಯಾವ ಕ್ಷೇತ್ರದಲ್ಲಿ ಯಾರನ್ನು ಅಭ್ಯರ್ಥಿ ಮಾಡಬೇಕು ಎನ್ನುವ ಕುರಿತು ಸುದೀರ್ಘ‌ ಚರ್ಚೆ ನಡೆಸಿದರು. ಹಿಂದುಳಿದ ವರ್ಗ, ಲಿಂಗಾಯತರು ಹಾಗೂ ಅಲ್ಪಸಂಖ್ಯಾತರ ಸಮುದಾಯದವರ ನಡುವೆ ಪೈಪೋಟಿ ಹೆಚ್ಚಿರುವುದರಿಂದ ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ಕ್ಷೇತ್ರಗಳ ಲೆಕ್ಕಾಚಾರ ಹಾಕಿ ಅಭ್ಯರ್ಥಿಗಳ ಅಂತಿಮ ಪಟ್ಟಿ
ಸಿದ್ದಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ

Advertisement

Udayavani is now on Telegram. Click here to join our channel and stay updated with the latest news.

Next