Advertisement

ಪ್ರತಿಭಟನೆಯಿಂದ ಕಾಂಗ್ರೆಸ್ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ

01:37 PM Mar 04, 2023 | Team Udayavani |

ಚಿತ್ರದುರ್ಗ: ಲೋಕಾಯುಕ್ತವನ್ನು ದುರ್ಬಲಗೊಳಿಸಿ 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಭಟಿಸುವ ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು‌

Advertisement

ಚಿತ್ರದುರ್ಗದ‌ ಎಸ್ ಜೆಎಂ ಹೆಲಿಪ್ಯಾಡ್ ನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಗಳ ಕಚೇರಿಯಲ್ಲೇ 2 ಲಕ್ಷ ಹಣ ಸಿಕ್ಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರಾ, ಅಂದು ಲೋಕಾಯುಕ್ತ ಇದ್ದಿದ್ದರೆ ಅರೆಸ್ಟ್ ಆಗುತ್ತಿದ್ದರು. ಆದರೆ, ಲೋಕಾಯುಕ್ತ ದುರ್ಬಲಗೊಳಿಸಿದ್ದರು ಎಂದರು.

ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಎನ್ನುವುದಕ್ಕೆ ಮಾಡಾಳ್ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿರುವುದೇ ಸಾಕ್ಷಿ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧನಿದ್ದೇನೆ: ಶಾಸಕ ಶರತ್‌ ಬಚ್ಚೇಗೌಡ

Advertisement

ಈ ಆರೋಪದ ಮೂಲಕ ಕಾಂಗ್ರೆಸ್ ತನ್ನ ಪಾಪಗಳನ್ನು ತೊಳೆದುಕೊಳ್ಳಲು ಸಾಧ್ಯ ಇಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ‌. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.

ಶಾಸಕ ಸ್ಥಾನಕ್ಕೆ ರಾಜಿನಾಮೆ ಅಥವಾ ಪಕ್ಷದಿಂದ ಉಚ್ಚಾಟನೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ರಾಜ್ಯದಲ್ಲಿ ಅತೀ ಹೆಚ್ಚು ಕೊಲೆಗಳಾಗಿವೆ. ಜಾತಿ, ಧರ್ಮ, ರಾಜಕೀಯ ದ್ವೇಷದ ಆಧಾರದಲ್ಲಿ ಕೊಲೆಗಳು ನಡೆದಿವೆ. ಕೊಲೆಗೆ ಕಾರಣವಾದ ಪಿಎಫ್ಐ, ಎಸ್ ಡಿಪಿಐ ಮೇಲಿನ ಪ್ರಕರಣಗಳನ್ನು ವಾಪಾಸು ಪಡೆದುಕೊಂಡಿರುವ ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.

ಅತ್ಯಂತ ಕೆಳ ಸ್ಥರದಲ್ಲಿರುವ ದುಡಿಯುವ ವರ್ಗಕ್ಕೆ ನೀಡಿರುವ ಯೋಜನೆಗಳನ್ನು ಎಲ್ಲರಿಗೂ ತಲುಪಿಸಲು ಆದೇಶ ಮಾಡಿದ್ದೇವೆ. ಚಿತ್ರದುರ್ಗ ಜಿಲ್ಲೆಯಿಂದ ಫಲಾನುಭವಿಗಳ ಸಮಾವೇಶ ಆರಂಭಿಸಿದ್ದು, ಎಲ್ಲ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಸಮಾವೇಶ ನಡೆಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next