ಕಾಪು: ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಕಾಪು ಪೇಟೆಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಕಾಪು ಪೇಟೆಯಲ್ಲಿ ಬೃಹತ್ ತೆರೆದ ಪರದೆಯ ಟಿವಿಯಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು ಪಕ್ಷದ ನೆಚ್ಚಿನ ನಾಯಕರಾದ ಎಸ್. ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಅವರು ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ನಾಯಕರಿಗೆ ಜಯಘೋಷ ಹಾಕಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಬಂಗೇರ, ಅಮೀರ್ ಕಾಪು, ದಿನೇಶ್ ಕೋಟ್ಯಾನ್ ಪಲಿಮಾರು, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್ ಶೇಖ್, ಶಿರ್ವ ಗ್ರಾ. ಪಂ. ಅಧ್ಯಕ್ಷ ರತನ್ ಶೆಟ್ಟಿ, ವೈ. ಸುಧೀರ್ ಕುಮಾರ್, ಪುರಸಭೆ ಸದಸ್ಯರಾದ ಸತೀಶಚಂದ್ರ, ಅಬ್ದುಲ್ ರಜಾಕ್, ರಾಧಿಕಾ ಸುವರ್ಣ, ಶೋಭಾ ಬಂಗೇರ, ಫರ್ಜಾನ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕರ್ಕೇರ, ಕರುಣಾಕರ್ ಪೂಜಾರಿ, ಮೇಲ್ವಿನ್ ಡಿಸೋಜ, ಯಶವಂತ್ ಪಲಿಮಾರು, ಪ್ರಭಾಕರ ಪೂಜಾರಿ, ಪಕ್ಷದ ಮುಖಂಡರಾದ ಅಶ್ವಿನಿ ನವೀನ್, ಕಿಶೋರ್ ಕುಮಾರ್, ಮಾಧವ ಪಾಲನ್, ದೇವರಾಜ್ ಕೋಟ್ಯಾನ್, ಜಹೀರ್ ಅಹಮದ್ ಬೆಳಪು, ಎಚ್. ಉಸ್ಮಾನ್, ಲವ ಕರ್ಕೇರ, ಹಸನಬ್ಬ ಶೇಖ್ ಮೊದಲಾದವರು ಉಪಸ್ಥಿತರಿದ್ದರು.
ಪಕ್ಷದ ಹಿರಿಯ-ಕಿರಿಯ ನಾಯಕರು, ವಿವಿಧ ಮುಂಚೂಣಿ ಘಟಕಗಳ ಹಾಗೂ ಇತರ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಎಲ್ಲಾ ಗ್ರಾಮೀಣ ಸಮಿತಿ ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.