Advertisement

ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ : ಗೋವಾದಲ್ಲಿ 8 ಕೈ ಶಾಸಕರು ಬಿಜೆಪಿ ತೆಕ್ಕೆಗೆ !

01:18 PM Sep 14, 2022 | Team Udayavani |

ಪಣಜಿ : ಒಂದು ಕಡೆ ಭಾರತ್ ಜೋಡೋ ಯಾತ್ರೆ’ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಲು ಮುಂದಾದರೆ ಗೋವಾದಲ್ಲಿ ಎಂಟು ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಹೇಳಿದ್ದಾರೆ.

Advertisement

11 ಶಾಸಕರಲ್ಲಿ ಎಂಟು ಮಂದಿ ಹಿರಿಯು ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಇಂದು ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಅವರು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿ ಎಂಟು ಮಂದಿ ಬಿಜೆಪಿ ಸೇರಿದ್ದಾರೆ.

ವಿಧಾನಸಭೆ ಕಲಾಪ ನಡೆಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶಾಸಕರು ಸಭಾಧ್ಯಕ್ಷರನ್ನು ಭೇಟಿಯಾಗಿರುವುದು ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ. ಕಾಂಗ್ರೆಸ್​ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಖಚಿತಪಡಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next