Advertisement

Congress ಸೆ.16ಕ್ಕೆ ಹೈದರಾಬಾದ್‌ನಲ್ಲಿ ಸಿಡಬ್ಲ್ಯೂಸಿ ಸಭೆ

06:48 PM Sep 04, 2023 | Team Udayavani |

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಹೊಸತಾಗಿ ರಚನೆಯಾಗಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಸೆ.16ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

Advertisement

ಸೆ.17ರಂದು ನಗರ ಹೊರವಲಯದಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ನವದೆಹಲಿಯಲ್ಲಿ ಸೋಮವಾರ ತಿಳಿಸಿದ್ದಾರೆ.

ರ‍್ಯಾಲಿಯಲ್ಲಿ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ತೆಲಂಗಾಣಕ್ಕಾಗಿ ಪಕ್ಷ ಕರ್ನಾಟಕದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಖರ್ಗೆಯವರು ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ಸಿಡಬ್ಲ್ಯೂಸಿ ಸದಸ್ಯರು, ಆಹ್ವಾನಿತರು ಭೇಟಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೇಣುಗೋಪಾಲ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next