Advertisement

ಸೋನಿಯಾ ಗಾಂಧಿಗೆ ಮಾತೃ ವಿಯೋಗ

07:17 PM Sep 01, 2022 | Team Udayavani |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ (90) ನಿಧನರಾಗಿದ್ದಾರೆ.

Advertisement

ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ ಮತ್ತು ಅವರ ಅಂತ್ಯಕ್ರಿಯೆ ಬುಧವಾರ ನಡೆಯಿತು ಎಂದು ಸಂಸದ ಜೈರಾಂ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

ತಾಯಿಯನ್ನು ಕಾಣಲು ಸೋನಿಯಾ ಆ.23ರಂದು ಇಟಲಿಗೆ ತೆರಳಿದ್ದರು. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ವಾದ್ರಾ ಕೂಡ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಸೋನಿಯಾ ತಾಯಿ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next