Advertisement

ಅನರ್ಹತೆ ಭೀತಿ! ರಾಜೀನಾಮೆ ಕೊಟ್ಟ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಗೆ “ಕೈ” ದೂರು

10:34 AM Jul 10, 2019 | Team Udayavani |

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ 12 ಶಾಸಕರ ವಿರುದ್ಧ ಸಂವಿಧಾನಬದ್ಧವಾಗಿ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಕಾಂಗ್ರೆಸ್ ಪಕ್ಷ ದೂರು ನೀಡಲಿದೆ. ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಅನರ್ಹಗೊಂಡರೆ ಅವರು ಎಲ್ಲಾ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಮಂಗಳವಾರ ಬೆಳಗ್ಗೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯಗೊಂಡ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅತೃಪ್ತ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡುತ್ತೇವೆ. ಈ ಕಾಯ್ದೆಯಡಿ ಶಾಸಕರು ಅನರ್ಹಗೊಂಡರೆ ಮುಂದಿನ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟ ಶಾಸಕರ ಬಗ್ಗೆ ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ನಾನು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಯಾರು ರಾಜೀನಾಮೆ ನೀಡಿದ್ದಾರೋ ಆ ಶಾಸಕರು ಕೂಡಲೇ ರಾಜೀನಾಮೆ ವಾಪಸ್ ಪಡೆಯಲಿ. ಇಲ್ಲದಿದ್ದರೆ ಅನರ್ಹಗೊಳ್ಳುತ್ತೀರಿ ಎಂಬ ಎಚ್ಚರಿಕೆಯ ಸಂದೇಶವನ್ನು ಸಿದ್ದರಾಮಯ್ಯ ರವಾನಿಸಿದ್ದಾರೆ.

ಜುಲೈ 12ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಎಲ್ಲಾ ಇಲಾಖೆಗಳ ಬೇಡಿಕೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಅಧಿವೇಶನಕ್ಕೆ ಹಾಜರಾಗುವಂತೆ ಎಲ್ಲಾ ಶಾಸಕರಿಗೂ ಮನವಿ ಮಾಡಲಾಗಿದೆ.

Advertisement

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣಿಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾದರ್ಶಿ ಈಶ್ವರ ಖಂಡ್ರೆ ಹಾಗೂ ಶಾಸಕರು ಸಭೆಗೆ ಹಾಜರಾಗಿದ್ದರು. ರಾಜೀನಾಮೆ ಕೊಟ್ಟ ಶಾಸಕರು ಸಭೆಗೆ ಗೈರು ಹಾಜರಾಗಿದ್ದರು. ಇನ್ನುಳಿದ ಕೆಲವು ಶಾಸಕರು ಗೈರಾಗಿದ್ದು, ಅದಕ್ಕೆ ಕಾರಣ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next