Advertisement

ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ದೂರು

06:30 AM Mar 29, 2018 | Team Udayavani |

ಬೆಂಗಳೂರು: “ಅಹಿಂದ ಅಲ್ಲ’, “ಅವರೊಬ್ಬ ಅಹಿಂದೂ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ಬುಧವಾರ ದೂರು ಸಲ್ಲಿಸಿದೆ.

Advertisement

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ್‌ ನೇತೃತ್ವದ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಲಿಖೀತ ದೂರು ಸಲ್ಲಿಸಿತು. ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕೆಸಲ ಮಾಡುತ್ತಿದೆ. 

ಸಿದ್ಧರಾಮಯ್ಯ ಅಹಿಂದ ಅಲ್ಲ, ಅಹಿಂದೂ ಎಂದು ಹೇಳಿರುವ ಅಮಿತ್‌ ಶಾ  ಸ್ವತಃ ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಇದು ಪ್ರಜಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಐಪಿಸಿ ಸೆಕ್ಷನ್‌ 153 ಎ ಪ್ರಕಾಶ ಶಿಕ್ಷಾರ್ಹ ಅಪರಾಧವಾಗಿದೆ. ಹಾಗಾಗಿ ಅಮಿತ್‌ ಶಾ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next