Advertisement

ಯಡಿಯೂರಪ್ಪ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್‌ ದೂರು

11:22 PM May 15, 2019 | Team Udayavani |

ಬೆಂಗಳೂರು: ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದರೆ ಲಿಂಗಾಯತರಿಗೆ ಅವಮಾನಿಸಿದಂತೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಜನಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

Advertisement

ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯಘಟಕದ ಸಂಚಾಲಕ ಎ.ಎನ್‌.ನಟರಾಜ್‌ ಗೌಡ ನೇತೃತ್ವದಲ್ಲಿ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ಗೆ ದೂರು ಸಲ್ಲಿಸಿದ್ದು, ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಂದು ಸಮುದಾಯದ ಮತದಾರರ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.

ಚಿಂಚೋಳಿ ಚುನಾವಣಾ ಪ್ರಚಾರ ಸಭೆಯಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಜಾತಿ ಆಧಾರಿತ ಮತ ಧ್ರುವೀಕರಣ ಮಾಡುವ ದುರುದ್ದೇಶದಿಂದ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದು, ಇದು 2017ರ ಸುಪ್ರೀಂಕೋರ್ಟ್‌ ಆದೇಶದ ತೀರ್ಪಿನ ಪ್ರಕಾರ ಜನ ಪ್ರತಿನಿಧಿ ಕಾಯ್ದೆ1951ರ ಸೆಕ್ಸೆನ್‌ 123(3)ನ ಉಲ್ಲಂಘನೆಯಾಗಿದೆ.

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿರುವ ಯಡಿಯೂರಪ್ಪನವರು ಚುನಾವಣೆಯಲ್ಲಿ ಜಾತಿಯಾಧಾರಿತ ಹೇಳಿಕೆ ನೀಡಿರುವುದರಿಂದ ಅವರ ವಿರುದ್ಧ ಜನಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next