ಚಿಕ್ಕಬಳ್ಳಾಪುರ: ವಿದ್ಯುತ್ ದರ ಹೆಚ್ಚಳ ಹಾಗೂ ಹಾಲಿನ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Advertisement
ಕಾಂಗ್ರೆಸ್ ಸರ್ಕಾರ ಕಂಡಿಷನ್ ಸರ್ಕಾರ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆ ಕೂಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮ ಲಿಂಗಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಸೀಕಲ್ಲು ರಾಮಚಂದ್ರಪ್ಪ, ಕೃಷ್ಣಮೂರ್ತಿ, ಮೋಹನ್, ಚಂದ್ರಶೇಖರ, ಲಕ್ಷ್ಮಿ ಪತಿ, ಕಾಂತರಾಜ್ ಇದ್ದರು.