Advertisement

Congress: ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ “ಗ್ಯಾರಂಟಿ”

09:40 PM May 22, 2023 | Team Udayavani |

ಭೋಪಾಲ್‌: ಕಾಂಗ್ರೆಸ್‌ನ “5 ಗ್ಯಾರಂಟಿ’ಗಳು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸು ಕಂಡ ಬೆನ್ನಲ್ಲೇ ಈಗ ಮಧ್ಯಪ್ರದೇಶ ಚುನಾವಣೆಯಲ್ಲೂ ಪಕ್ಷ ಇದೇ ದಾಳ ಉರುಳಿಸಿದೆ. ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‌ ಸೋಮವಾರ “ಗ್ಯಾರಂಟಿ’ಗಳನ್ನು ಘೋಷಿಸಿದೆ. ಪಕ್ಷವು ಅಧಿಕಾರಕ್ಕೆ ಬಂದರೆ, 500ರೂ.ಗಳಿಗೆ ಎಲ್‌ಪಿಜಿ ಸಿಲಿಂಡರ್‌, ಕುಟುಂಬದ ಪ್ರತಿ ಮಹಿಳೆಗೆ ಮಾಸಿಕ 1,500ರೂ. ನೆರವು, 100 ಯುನಿಟ್‌ವರೆಗೆ ಉಚಿತ ವಿದ್ಯುತ್‌, ಕೃಷಿ ಸಾಲ ಮನ್ನಾ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ ನುಡಿದಂತೆಯೇ ನಡೆದಿದ್ದೇವೆ, ಮಧ್ಯಪ್ರದೇಶದಲ್ಲೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ..

Advertisement
Advertisement

Udayavani is now on Telegram. Click here to join our channel and stay updated with the latest news.

Next