Advertisement

ಟಿಕೆಟ್‌ಗಾಗಿ ಆಕಾಂಕ್ಷಿಗಳ ಮುಂದುವರೆದ ಲಾಬಿ

07:00 AM Apr 12, 2018 | |

ಬೆಂಗಳೂರು: ಅಭ್ಯರ್ಥಿಗಳ ಆಯ್ಕೆ ಸಂಬಂಧ ಏ.13 ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಟಿಕೆಟ್‌ ಖಾತ್ರಿ ಪಡಿಸಿಕೊಳ್ಳಲು ಬುಧವಾರ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಲಗ್ಗೆ ಇಟ್ಟಿದ್ದರು. ಬೆಳಿಗ್ಗೆಯೇ ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಮಾಜಿ ಮೇಯರ್‌ ಪದ್ಮಾವತಿ ಆಗಮಿಸಿದ್ದರು.

Advertisement

ಇದರ ಬೆನ್ನಲ್ಲೇ ಬಸವೇಶ್ವರ ನಗರ ವಾರ್ಡ್‌ನ ಹಾಲಿ ಬಿಜೆಪಿ ಕಾರ್ಪೊರೇಟರ್‌ ಉಮಾವತಿ ಪತಿ,ಮಾಜಿ ಕಾರ್ಪೊರೇಟರ್‌ ಪದ್ಮರಾಜ್‌ ಸಹ ಪದ್ಮಾವತಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದು ವಿಶೇಷ. ಅಲ್ಲದೆ, ಹುಮ್ನಾಬಾದ್‌ ಶಾಸಕ ರಾಜಶೇಖರ್‌ ಪಾಟೀಲ್‌ ಕೂಡ ಆಗಮಿಸಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಆರಸೀಕರೆ ಟಿಕೆಟ್‌ ಆಕಾಂಕ್ಷಿ ಶ್ರೀನಿವಾಸ್‌ ಬೆಂಬಲಿಗರು ಸಿಎಂ ಮನೆ ಮುಂದೆ ಟಿಕೆಟ್‌ ನೀಡುವಂತೆ ಆಗ್ರಹಿಸಿದರು. ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಕೂಡ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು.

ಆದರೆ, ತಾವು ಯಾವುದೇ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.ಪದ್ಮನಾಭನಗರ ಕ್ಷೇತ್ರದ ಟಿಕೆಟ್‌ಗಾಗಿ ಮಾಜಿ
ಶಾಸಕ ಎಂ.ಶ್ರೀನಿವಾಸ್‌ ಹಾಗೂ ಮಾಜಿ ಮೇಯರ್‌ ವೆಂಕಟೇಶ್‌ ಮೂರ್ತಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ರಾಯಣ್ಣ ಬ್ರಿಗೇಡ್‌ನ‌ಲ್ಲಿ ಗುರುತಿಸಿಕೊಂಡಿದ್ದ ವೆಂಕಟೇಶ್‌ ಮೂರ್ತಿ ಬಿಜೆಪಿಯಿಂದ ದೂರ ಸರಿದಿರುವು ದರಿಂದ ಕಾಂಗ್ರೆಸ್‌ ಟಿಕೆಟ್‌ ನೀಡುವ ಕುರಿತು ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ, ಬೆಳಗಾವಿ ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತು ಜಾರಕಿಹೊಳಿ ಸಹೋದರರು ಮತ್ತು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ನಡುವಿನ ಭಿನ್ನಾಭಿಪ್ರಾಯ ಸರಿಪಡಿಸಲು ಸಿಎಂ ಕೃಷ್ಣಾಗೆ ಕರೆಸಿ ಮಾತುಕತೆ ನಡೆಸಿದ್ದಾರೆ.

Advertisement

ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ, ನಾನು ಕಾಂಗ್ರೆಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ. ನನಗೆ ಮಂತ್ರಿ ಸ್ಥಾನ ಮತ್ತು ಕ್ಷೇತ್ರಕ್ಕೆ ಅನುದಾನ ನೀಡದ ಹಿನ್ನೆಲೆಯಲ್ಲಿ ಅಸಮಾಧಾನ ಇತ್ತು. ಆದರೆ, ಈಗ ಯಾವುದೇ ಅಸಮಾಧಾನ ಇಲ್ಲ.
– ರಾಜಶೇಖರ್‌ ಪಾಟೀಲ್‌,
ಹುಮ್ನಾಬಾದ್‌ ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next