Advertisement

ಮೈತ್ರಿಯಿಂದಲೇ ಕಾಂಗ್ರೆಸ್‌ಗೆ ಹೀನಾಯ ಸ್ಥಿತಿ: ಡಾ.ರವೀಂದ್ರ

02:12 PM May 26, 2019 | Team Udayavani |

ಮಂಡ್ಯ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ವಿಧಾನಸಭೆಗೆ ಮಾತ್ರ ಸೀಮಿತಗೊಳಿಸಬೇ ಕಾಗಿತ್ತು. ಲೋಕಸಭಾ ಚುನಾವಣೆಯಲ್ಲೂ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಕಾಂಗ್ರೆಸ್‌ ಹೀನಾಯ ಸ್ಥಿತಿ ತಲುಪಲು ಕಾರಣ ವಾಯಿತು ಎಂದು ಕಾಂಗ್ರೆಸ್‌ ಮುಖಂಡ ಡಾ.ಎಚ್.ಎನ್‌.ರವೀಂದ್ರ ಹೇಳಿದರು.

Advertisement

ಲೋಕಸಭೆಯಲ್ಲಿ ಮೈತ್ರಿ ಮಾಡಿ ಕೊಳ್ಳದಿದ್ದರೆ ಕನಿಷ್ಠ 5 ರಿಂದ 6 ಕ್ಷೇತ್ರಗಳ ನ್ನಾದರೂ, ಕಾಂಗ್ರೆಸ್‌ ಗೆಲ್ಲಬಹು ದಾಗಿತ್ತು. ಮೈತ್ರಿ ಮಾಡಿಕೊಂಡಿದ್ದರಿಂದಲೇ ದೊಡ್ಡ ಹೊಡೆತ ಬೀಳಲು ಕಾರಣವಾಯಿತು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮನ್ನಣೆ ನೀಡಿ:ಸಿದ್ದರಾಮಯ್ಯ ಹಾಗೂಎಚ್.ಡಿ. ಕುಮಾರಸ್ವಾಮಿ ಅವರಿಂದಾಗಿ ಮೂರನೇಯವರಿಗೆ ಲಾಭವಾಯಿತು. ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡದಿ ದ್ದರೆ ಏನಾಗುತ್ತದೆ ಎಂಬುದಕ್ಕೆ ಈ ಚುನಾ ವಣೆಯೇ ಸಾಕ್ಷಿ ಎಂದು ಹೇಳಿದರು.

ಗೊಂದಲ ಸೃಷ್ಟಿ:ಮಂಡ್ಯ ಲೋಕಸಭಾ ಕ್ಷೇತ್ರದ ಚುನಾ ವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡಿದ್ದರೆ ನಾವು ಯಾವುದೇ ಹೋ ರಾಟ ಮಾಡುತ್ತಿರಲಿಲ್ಲ. ಕುಮಾರಸ್ವಾಮಿ ಅವರು ವಂಶಪಾರಂಪರ್ಯ ರಾಜಕಾರಣ ಬೆಳೆ ಸುವ ಉದ್ದೇಶದಿಂದ ಪುತ್ರ ನಿಖೀಲ್ರನ್ನು ಕಣಕ್ಕಿಳಿಸಿದ್ದರಿಂದಲೇ ಗೊಂದಲ ಸೃಷ್ಟಿಯಾಯಿತು ಎಂದರು.

ಸ್ವಾಭಿಮಾನಕ್ಕೆ ಗೆಲುವು: ಮಂಡ್ಯ ಜಿಲ್ಲೆಯ ಜನ, ನಮ್ಮ ಜಿಲ್ಲೆ, ನಮ್ಮ ಹೆಮ್ಮೆಗೆ ಬೆಂಬಲ ನೀಡಿ ಸುಮಲತಾ ಅವರನ್ನು ಗೆಲ್ಲಿಸುವ ಮೂಲಕ ಸ್ವಾಭಿಮಾನ ಎತ್ತಿ ಹಿಡಿದಿದ್ದಾರೆ. ದೇಶದ ಚುನಾವಣೆ ರೀತಿ-ನೀತಿ ಗಮನಿ ಸಿದರೆ ಮಂಡ್ಯ ಜಿಲ್ಲೆ ವಿಭಿನ್ನ. ಸುಮಲತಾ ಅವರು ದ್ವೇಷ ಮಾಡದೆ ಸರ್ವಪಕ್ಷಗಳ ಜೊತೆ ಸಮನ್ವಯತೆ ಸಾಧಿಸಿ ಜಿಲ್ಲೆಯ ಸರ್ವತೋ ಮುಖ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ರಚನಾತ್ಮಕ ಕೆಲಸಗಳಲ್ಲಿ ತೊಡಗಲಿ ಎಂದು ಸಲಹೆ ನೀಡಿದರು.

Advertisement

ಬಿಜೆಪಿ ಸೇರೋಲ್ಲ: ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸಿ, ಕಾಂಗ್ರೆಸ್‌, ಬಿಜೆಪಿ, ರೈತ ಸಂಘ ಸೇರಿ ವಿವಿಧ ಸಂಘಟನೆಗಳ ಬೆಂಬಲ ಪಡೆದು ಜಯ ಸಾಧಿಸಿದ್ದಾರೆ. ಅವರು ಬಿಜೆಪಿಗೆ ಸೇರುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಕಾಂಗ್ರೆಸ್‌, ರೈತ ಸಂಘ ಸೇರಿ ವಿವಿಧ ಸಂಘಟನೆಗಳ ಮುಖಂಡರ ಜೊತೆ ಚರ್ಚೆ ಮಾಡದೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಬಿಜೆಪಿಯವರು ಸುಮಲತಾ ಅವರಿಗೆ ಬೆಂಬಲ ನೀಡಿರುವುದರಿಂದ ಅವರು ಬಿಜೆಪಿ ಸೇರುತ್ತಾರೆ ಎಂದು ಹೇಳುತ್ತಿದ್ದಾರೆ ಎಂದರು.

ಸಂಸದೆ ಸುಮಲತಾ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾರೆಂಬ ಆಶಾಭಾವನೆ ನನ್ನಲ್ಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆ, ನಮ್ಮ ಹೆಮ್ಮೆ ಹೋರಾಟ ಮಾಡಿದಂತೆ ಮುಂದಿನ ದಿನಗಳಲ್ಲಿ ಪ್ರತೀ ಹಳ್ಳಿಗಳಿಗೆ ಭೇಟಿ ನೀಡಿ ಮೂಲ ಸೌಕರ್ಯ ಆಲಿಸಿ ಸಂಸದರ ಮೂಲಕ ಪರಿಹಾರ ಕಂಡುಕೊಳ್ಳುತ್ತೇವೆಂದರು. ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಶೈಕ್ಷಣಿಕ ಸಂಸ್ಥೆ, ಆರೋಗ್ಯ ಹಾಗೂ ಉದ್ಯೋಗಕ್ಕೆ ಒತ್ತು ಕೊಡುತ್ತೇವೆ. ಇದು ಸುಮಲತಾ ಅವರ ಉದ್ದೇಶವೂ ಆಗಿದೆ ಎಂದು ಹೇಳಿದರು. ಕಾಂಗ್ರೆಸ್‌ ಮುಖಂಡರಾದ ಸುಂಡಹಳ್ಳಿ ಮಂಜುನಾಥ್‌, ಸೋಮಶೇಖರ್‌ ಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next