ಕೂಡ್ಲಿಗಿ: ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಪಟ್ಟಣದ ವಾಸವಿ ಶಾಲೆಯಲ್ಲಿ ಕೂಡ್ಲಿಗಿ ಹಾಗೂ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ಹಾಗೂ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯವನ್ನುಖಂಡಿಸಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ನಿಯಂತಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜನರ ಮೇಲೆ ತೆರಿಗೆ ಹೊರೆಯನ್ನು ಹೇರುತ್ತಿದ್ದು ಜನರು ಜೀವನ ಮಾಡುವುದೇ ದುಸ್ತರವಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ವಿಜಯಸಿಂಗ್ ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಆರೋಗ್ಯ ಸಚಿವ ಹರ್ಷವರ್ಧನ್ ರಾಜೀನಾಮೆಯೇಸಾಕ್ಷಿಯಾಗಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಸರ್ಕಾದಿಂದ ಸಾಧ್ಯವಾಗಿಲ್ಲ ಎಂದು ಅವರು ಆರೋಪಿಸಿದರು.
ಮಾಜಿ ಶಾಸಕ ಶಿರಾಜ್ ಶೇಖ್, ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಜಿ. ನಾಗಮಣಿ, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ, ಡಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಗುಜ್ಜಲ್ ರಘು ಇದ್ದರು. ಇದಕ್ಕೂಮೊದಲು ತೈಲ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಸೆ„ಕಲ್ ಜಾಥಾ ನಡೆಸಲಾಯಿತು.