Advertisement

ಕಾಂಗ್ರೆಸ್ಸನ್ನು ರಾಜ್ಯದ ಜನರು ಧಿಕ್ಕರಿಸಿದ್ದಾರೆ: ಬಿ.ವೈ. ವಿಜಯೇಂದ್ರ

06:34 PM Jan 25, 2023 | Team Udayavani |

ಪುಂಜಾಲಕಟ್ಟೆ: ಅಧಿಕಾರದಿಂದ ಹೊರಬಿದ್ದಿರುವ ಕಾಂಗ್ರೆಸ್‌ ಪಕ್ಷದ ಸ್ಥಿತಿ ನೀರಿನಿಂದ ತೆಗೆದ ಮೀನಿನಂತಾಗಿದೆ. ಕಾಂಗ್ರೆಸ್‌ ರಾಜ್ಯದ ಪ್ರಜೆಗಳಿಂದ ಧಿಕ್ಕರಿಸಲ್ಪಟ್ಟಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Advertisement

ಅವರು ಬಂಟ್ವಾಳ ಬಿಜೆಪಿಯ ವತಿಯಿಂದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 10ನೇ ದಿನದ ಪಾದಯಾತ್ರೆಯ ಬಳಿಕ ಕೊçಲ ಶ್ರೀದೇವಪ್ಪ ಶೆಟ್ಟಿ ಮಾವಂತೂರು ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಬಿ.ಎಸ್‌. ಯಡಿಯೂರಪ್ಪ ಹಾಗೂ ಕರಾವಳಿಗೆ ಅವಿನಾಭಾವ ಸಂಬಂಧವಿದ್ದು, ಅದರ ಪರಿಣಾಮವಾಗಿಯೇ ಬಂಟ್ವಾಳಕ್ಕೆ ಸಾವಿರ ಕೋ.ರೂ. ಗಳಿಗೆ ಮಿಕ್ಕಿದ ಅನುದಾನ ನೀಡಿದ್ದಾರೆ ಎಂದರು. ರಾಹುಲ್‌ ಗಾಂಧಿ ಕಾಲಿಟ್ಟ ರಾಜ್ಯಗಳಲ್ಲಿ ಕಾಂಗ್ರೆಸ್‌ ನಿರ್ನಾಮ ಆಗಿದ್ದು, ಅವರ ಭಾರತ್‌ ಜೋಡೊ ಮೂಲಕ ಕಾಂಗ್ರೆಸ್‌ ಅನ್ನು ಅಧಃಪತನಕ್ಕೆ ತಳ್ಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 25-26 ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕಾದರೆ ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿರುವುದು ಅನಿವಾರ್ಯವಾಗಿದೆ ಎಂದರು.

ಕಾಸರಗೋಡು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಂಟಾರು ರವೀಶ ತಂತ್ರಿ ಮಾತನಾಡಿ, ಬಂಟ್ವಾಳಕ್ಕೆ ರಾಜೇಶ್‌ ನಾೖಕ್‌ ಮಾತ್ರ ಸರದಾರ ಎಂಬುದನ್ನು ಜನರೇ ತೀರ್ಮಾನ ಮಾಡಿದ್ದಾರೆ ಎಂದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ನಗರ ನೀರು ಸರಬರಾಜು- ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜೆ.ಕೆ.ಭಟ್‌, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್‌ ಸಂದೇಶ್‌ ಶೆಟ್ಟಿ, ಪಾದಯಾತ್ರೆಯ ಸಹಸಂಚಾಲಕ ಮಾಧವ ಮಾವೆ, ಸುದರ್ಶನ್‌ ಬಜ, ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ರಾಯಿ ಗ್ರಾ.ಪಂ.ಅಧ್ಯಕ್ಷೆ ರತ್ನಾ ಆನಂದ್‌ ಉಪಸ್ಥಿತರಿದ್ದರು.

Advertisement

ಪಾದಯಾತ್ರೆಯ ಸಂಚಾಲಕ ಬಿ.ದೇವದಾಸ್‌ ಶೆಟ್ಟಿ ಅವರು ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿದರು. ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ ಸ್ವಾಗತಿಸಿದರು. ರಾಯಿ ಗ್ರಾ.ಪಂ.ಉಪಾಧ್ಯಕ್ಷ ರಶ್ಮಿತ್‌ ಶೆಟ್ಟಿ ಕೈತ್ರೋಡಿ ವಂದಿಸಿದರು. ಪ್ರ.ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿದರು.

ತೃಪ್ತಿ ಇದೆ
ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದರೂ, ಏನು ಆಶಯವಿತ್ತೋ ಅದನ್ನು ಈಡೇರಿಸಿದ ತೃಪ್ತಿ ಇದೆ.
ಬಂಟ್ವಾಳದಲ್ಲಿ ಬಿಜೆಪಿ ಗೆಲ್ಲಬೇಕು ಎಂದು ಪಣ ತೊಟ್ಟು ಕೆಲಸ ಮಾಡಿದ ಪರಿಣಾಮ ಬಿಜೆಪಿ ಗೆದ್ದಿದೆ. ಅಭಿವೃದ್ಧಿ ನಿರಂತರವಾಗಿದ್ದು, ಶಾಂತಿಯ
ಬಂಟ್ವಾಳ ನಿರ್ಮಾಣ ಮಾಡಿದ ತೃಪ್ತಿ ನನಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next