Advertisement

ವಿಶ್ವನಾಥ್‌ ಹಣದ ಆರೋಪ: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಆಗ್ರಹ

07:28 PM Dec 02, 2020 | sudhir |

ಬೆಂಗಳೂರು: ಹುಣಸೂರು ಉಪಚುನಾವಣೆ ವೇಳೆ ತಮಗೆ ಪಕ್ಷದಿಂದ ದೊಡ್ಡ ಮೊತ್ತ ನೀಡಲಾಗಿತ್ತು ಎಂಬ ವಿಚಾರವನ್ನು ಬಿಜೆಪಿ ಅಭ್ಯರ್ಥಿಯಾಗಿದ್ದ ವಿಶ್ವನಾಥ್‌ ಅವರೇ ಒಪ್ಪಿಕೊಂಡಿದ್ದು, ಅವರು ಹೇಳಿರುವ ದೊಡ್ಡ ಮೊತ್ತ ಎಂದರೆ ಎಷ್ಟು? ಅದು ಬಿಳಿ ಹಣವಾ? ಕಪ್ಪು ಹಣವಾ? ಎಂದು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್‌, ಈ ಬಗ್ಗೆ ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದೆ.

Advertisement

ಮಾಜಿ ಸಂಸದ ವಿ.ಎಸ್‌ ಉಗ್ರಪ್ಪ, ಮಾಜಿ ಸಚಿವರಾದ ಎಚ್‌.ಎಂ. ರೇವಣ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಉಪಚುನಾವಣೆ ವೇಳೆಯಲ್ಲಿ ಬಿಜೆಪಿ ಪಕ್ಷದಿಂದ ತಮಗೆ ದೊಡ್ಡ ಮೊತ್ತದ ಹಣವನ್ನು ಕಳುಹಿಸಿಕೊಡಲಾಗಿತ್ತು. ಅದನ್ನು ಸಿ.ಪಿ ಯೋಗೇಶ್ವರ್‌ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌. ಸಂತೋಷ್‌ ಅವರು ತಲುಪಿಸದೇ ನನ್ನ ಸೋಲಿಗೆ ಸಂಚು ನಡೆಸಿದರು,’ ಎಂಬ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಸತ್ಯ ಹೇಳಿದ್ದಾರೆ. ಅವರು ತಮ್ಮ ಹೇಳಿಕೆಗೆ ಬದ್ಧರಾಗಿರುತ್ತಾರೆ ಎಂದು ಭಾವಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಬದುಕಿಗಾಗಿ ಗುಜರಿ ಆಯುತ್ತಿದ್ದ ಹುಡುಗ, ಅಂತಾರಾಷ್ಟ್ರೀಯ ಮಟ್ಟದ ಫೋಟೋಗ್ರಾಫರ್ ಆಗಿ ಬೆಳೆದ ಕಥೆ

“ನಾನು ಚುನಾವಣೆಗೆ ನಿಂತಾಗ ಪಕ್ಷದಿಂದ ಬರಬೇಕಾದ ದೊಡ್ಡ ಮೊತ್ತ ನನ್ನ ಕೈ ಸೇರಲಿಲ್ಲ. ಪಕ್ಷ ಕೊಟ್ಟ ಈ ದೊಡ್ಡ ಮೊತ್ತವನ್ನು ಸಿ.ಪಿ ಯೋಗೇಶ್ವರ್‌ ಹಾಗೂ ಸಂತೋಷ್‌ ಅವರು ನನಗೆ ತಲುಪಿಸದೇ ದುರ್ಬಳಕೆ ಮಾಡಿಕೊಂಡಿದ್ದು, ನಾನು ಚುನಾವಣೆಯಲ್ಲಿ ಸೋಲುವಂತೆ ಪಿತೂರಿ ಮಾಡಿದ್ದಾರೆ,’ ಎಂದು ವಿಶ್ವನಾಥ್‌ ಅವರು ಹೇಳಿದ್ದಾರೆ. ವಿಶ್ವನಾಥ್‌ ಅವರ ಈ ಹೇಳಿಕೆ ತಪ್ಪೊಪ್ಪಿಗೆ ಹೇಳಿಕೆಯಾಗಿದೆ. ಅವರು ಹೇಳಿರುವ ಈ ದೊಡ್ಡ ಮೊತ್ತ ಎಂದರೆ ಎಷ್ಟು? ಅದು 10 ಕೋಟಿಯಾ? 25 ಕೋಟಿಯಾ? ಇದನ್ನು ಸ್ಪಷ್ಟಪಡಿಸಬೇಕು. ಈ ಹಣದ ಮೂಲ ಏನು? ಈ ಹಣವನ್ನು ಯಾರಾದರೂ ದೇಣಿಗೆ ರೂಪದಲ್ಲಿ ಕೊಟ್ಟಿ¨ªಾರಾ? ಅಥವಾ ಬಿಡಿಎ ಹಗರಣದಲ್ಲಿ ಆರ್‌ಟಿಜಿಎಸ್‌ ಮೂಲಕ ಬಂದ ಭ್ರಷ್ಟ ಹಣವನ್ನು ಕೊಟ್ಟರಾ? ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

Advertisement

ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚುನಾವಣಾ ಆಯೋಗ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸ್ವಯಂತ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕಿತ್ತು. ಆದರೆ, ಆ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಬೇಕಿದ್ದರೆ, ಈ ಪ್ರಕರಣವನ್ನು ಕೂಡಲೇ ಹೈ ಕೋರ್ಟಿನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಕಳೆದ ಒಂದು ತಿಂಗಳಿಂದ ಮುಖ್ಯಮಂತ್ರಿಗಳ ಕಚೇರಿ ಸುತ್ತ ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಅವರ ರಾಜಕೀಯ ಕಾರ್ಯದರ್ಶಿ ವಜಾ, ಮಾಧ್ಯಮ ಸಲಹೆಗಾರರ ರಾಜೀನಾಮೆ, ಸಂತೋಷ್‌ ಆತ್ಮಹತ್ಯೆ ಯತ್ನ ಪ್ರಕರಣಗಳು ಎಲ್ಲವೂ ಅನುಮಾನಗಳಿಗೆ ಕಾರಣವಾಗಿವೆ. ಈ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು.

ಇನ್ನು ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡರಿಗೆ ಹಣ ಕೊಟ್ಟಿರುವ ವಿಷಯ ಕಾಂಗ್ರೆಸ್‌ ಹಿರಿಯ ನಾಯಕರ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next