Advertisement

ಇನ್ನೊಂದು ವಾರ ವಿಸ್ತರಣೆಗೆ ಕಾಂಗ್ರೆಸ್‌ ಆಗ್ರಹ

11:27 PM Dec 20, 2021 | Team Udayavani |

ಬೆಳಗಾವಿ: ವಿಧಾನಮಂಡಲ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

Advertisement

ಮೂರು ವರ್ಷಗಳ ಬಳಿಕ ಅಧಿವೇಶನ ನಡೆಯುತ್ತಿದ್ದು ಪ್ರವಾಹ, ಅತಿವೃಷ್ಟಿ, ಉತ್ತರ ಕರ್ನಾಟಕ ನೀರಾವರಿ ವಿಷಯ, ಕೃಷಿ ಬಿಕ್ಕಟ್ಟು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಸಮಸ್ಯೆ, ಯುವಜನರನ್ನು ಕಾಡುತ್ತಿರುವ ನಿರುದ್ಯೋಗ, ಪ್ರಾದೇಶಿಕ ಅಸಮತೋಲನೆ ಮತ್ತಿತರ ಪ್ರಮುಖ ವಿಷಯಗಳನ್ನು ಚರ್ಚಿಸಬೇಕಾಗಿದೆ.

ಇದನ್ನೂ ಓದಿ:ಆಲಪ್ಪುಳ ಅವಳಿ ಕೊಲೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ

ಇದೇ ಸಂದರ್ಭದಲ್ಲಿ ಕೆಲವು ದುಷ್ಟ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗೆ ಹಾನಿ ಮಾಡುವ, ನಾಡಧ್ವಜ ಸುಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಿವೆ. ಈ ಎಲ್ಲ ವಿಷಯ ಚರ್ಚಿಸಬೇಕಾಗಿದೆ. ವಿಪಕ್ಷಗಳ ಬೇಡಿಕೆಗಳನ್ನು ತಾಂತ್ರಿಕವಾಗಿ ಬಗೆಹರಿಸದೆ ಮೊಂಡು ಹಠಕ್ಕೆ ಬಿದ್ದಿದೆ. ಇದರಿಂದ ಚರ್ಚೆಗೆ ಸಮಯ ಸಿಗುತ್ತಿಲ್ಲ. ಹೀಗಾಗಿ, ಒಂದು ವಾರ ಅಧಿವೇಶನ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next