Advertisement

ರಾಷ್ಟ್ರಧ್ವಜಕ್ಕೆ ಅವಮಾನ-ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

02:24 PM Feb 15, 2022 | Team Udayavani |

ಕಲಬುರಗಿ: ರಾಷ್ಟ್ರಧ್ವಜ ಕುರಿತಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ 1971ರ ಕಾಯ್ದೆಯ ಸೆಕ್ಸನ್‌ 2ರ ಸ್ಪಷ್ಟ ಉಲ್ಲಂಘನೆಯಾಗಿರುವುದರಿಂದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.

Advertisement

ದೇಶದ ಕೆಂಪುಕೋಟೆ ಸೇರಿದಂತೆ ಎಲ್ಲೆಡೆಯೂ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜವನ್ನು ಹಾರಿಸುವ ಕುರಿತಾಗಿ ಹೇಳಿರುವುದು ಪ್ರಚೋದನಕಾರಿ ಆಗಿದೆ. ಭಾರತದ ರಾಷ್ಟ್ರಧ್ವಜವನ್ನು 135 ಕೋ.ರೂ. ಜನರು ಗೌರವಿಸುವುದಾಗಿದೆ. ಆದರೆ ಸಚಿವರ ಹೇಳಿಕೆ ಭಾರತದ ಪ್ರಜೆಗಳ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಸಚಿವರ ಸಮಾಜದಲ್ಲಿ ಹೇಳಿಕೆಯು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುತ್ತದೆ. ಈಗಾಗಲೇ ರಾಜ್ಯದಲ್ಲಿ ವಿವಿಧ ಸಮುದಾಯಗಳ ನಡುವಿನ ಸಂಬಂಧ ಅತ್ಯಂತ ಸೂಕ್ಷ್ಮವಾಗಿದ್ದು, ಇಂತಹ ಸಂದರ್ಭದಲ್ಲಿ ಸಚಿವರ ಹೇಳಿಕೆ ಅಶಾಂತಿ ಹಾಗೂ ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಲಿದೆ. ಇದನ್ನೆಲ್ಲ ಗಮನಿಸಿ ರಾಜ್ಯದ ಶಾಂತಿ, ಸುವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು ಸಂಬಂಧಪಟ್ಟ ಕಾನೂನಿನಡಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ಕಾನೂನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ಶಾಸಕ ಬಿ.ಆರ್‌. ಪಾಟೀಲ್‌, ಮುಖಂಡರಾದ ಡಾ| ಕಿರಣ ದೇಶಮುಖ, ಈರಣ್ಣ ಝಳಕಿ, ರಾಜೀವ್‌ ಜಾನೆ, ಮಜರ್‌ ಅಲ್ಲಂಖಾನ್‌ ಸೇರಿದಂತೆ ಮುಂತಾದವರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next