Advertisement

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಾಜೀನಾಮೆಗೆ ಆಗ್ರಹ

12:17 PM Nov 15, 2017 | Team Udayavani |

ಮೈಸೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ವಿ.ವೇಣುಗೋಪಾಲ್‌ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಇದೀಗ ತಾವೇ ಅತ್ಯಾಚಾರದ ಆರೋಪಕ್ಕೆ ಸಿಲುಕಿದ್ದಾರೆ. ಹೀಗಿದ್ದರೂ ಸಚ್ಚಾರಿತ್ರ್ಯ, ನೈತಿಕತೆ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರು, ಪಕ್ಷದ ಮುಖಂಡರ ಬಗ್ಗೆ ಮೌನವಹಿಸಿರುವುದು ನಾಚಿಕೆಗೇಡಿನ ಸಂಗತಿ. ಹೀಗಾಗಿ ಕಾಂಗ್ರೆಸ್‌ ಮುಖಂಡರು ಮೊದಲು ಅವರನ್ನು ರಾಜ್ಯದಿಂದ ದೂರವಿಡಬೇಕು ಎಂದು ಆಗ್ರಹಿಸಿದರು.

ಮಹಿಳೆಯರ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾ ಬೀಗುವ ಸಿಎಂ ಸಿದ್ದರಾಮಯ್ಯ, ಇದೀಗ ತಮ್ಮದೇ ಪಕ್ಷದ ಮುಖಂಡರೊಬ್ಬರು ಅತ್ಯಾಚಾರದ ಆರೋಪ ಹೊತ್ತಿದ್ದರು. ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಖಂಡನೀಯ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹೊತ್ತಿರುವ ಕೆ.ವಿ.ವೇಣುಗೋಪಾಲ್‌, ತಮಗೆ ನೈತಿಕತೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಬಿ.ಎಂ.ನಟರಾಜ್‌, ವಿಭಾಗೀಯ ಸಹ ಪ್ರಭಾರಿ ಫ‌ಣೀಶ್‌, ಮಾಜಿ ಸಂಘಟನಾ ಕಾರ್ಯದರ್ಶಿ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ಎಚ್‌.ವಿ.ರಾಜೀವ್‌, ಸತೀಶ್‌, ನಂದೀಶ್‌ ಪ್ರೀತಂ, ಯುವ ಮೋರ್ಚಾ ನಗರಾಧ್ಯಕ್ಷ ಕೆ.ಗೋಕುಲ್‌ ಗೋವರ್ಧನ್‌, ಪಾಲಿಕೆ ಸದಸ್ಯ ಮಾ.ವಿ. ರಾಮಪ್ರಸಾದ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜು ಮತ್ತಿತರರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next