ಬೆಂಗಳೂರು : ಹಿಂದು ಪದದ ಬಗ್ಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾಡಿರುವ ವ್ಯಾಖ್ಯಾನ ವಿವಾದ ಸೃಷ್ಟಿಸುತ್ತಿದ್ದಂತೆ ಈ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.
ಜಾರಕಿಹೊಳಿ ಹೇಳಿಕೆ ಸಂಬಂಧ ಸೋಮವಾರ ಸಂಜೆಯೇ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಹಿಂದು ಜೀವನ ಪದ್ಧತಿಯನ್ನು ಹಾಡಿಹೊಗಳಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಕ್ಷಮೆ ಕೇಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಜಾರಕಿಹೊಳಿ ಹೇಳಿಕೆಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದರೆ ಜಾರಕಿಹೊಳಿ ಮಾತ್ರ ಈ ಬಗ್ಗೆ ಯಾವುದೇ ಕ್ಷಮೆ ಕೇಳಿಲ್ಲ. ಆದರೆ ನನ್ನ ಹೇಳಿಕೆಯನ್ನು ತಪ್ಪು ವ್ಯಾಖ್ಯಾನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟ ನೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿ ಹೇಳಿಕೆ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಉಡುಪಿಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.
ಇದನ್ನೂ ಓದಿ :ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜಿಗೆ ಹಾನಿ