Advertisement

ತಪ್ಪು ಹುಡುಕೋದೇ ಕಾಂಗ್ರೆಸ್‌ ಚಾಳಿ: ಬಿಎಸ್‌ವೈ

03:45 AM Jul 02, 2017 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲಿ ಭಾರತವು ವಿಶ್ವದಲ್ಲೇ ಒಂದು ಪ್ರಬಲ ರಾಷ್ಟ್ರವಾಗಿ ರೂಪುಗೊಳ್ಳುತ್ತಿರುವುದನ್ನು ಸಹಿಸದ ಕಾಂಗ್ರೆಸ್‌ ವಿನಾ ಕಾರಣ ಪ್ರಧಾನಿಯವರ ಪ್ರತಿ ಹೆಜ್ಜೆಯಲ್ಲಿ ತಪ್ಪು ಕಂಡು ಹಿಡಿಯುತ್ತಿದೆ. ಅದು ಆ ಪಕ್ಷದವರಿಗೆ ಚಾಳಿ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

Advertisement

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಎಸ್‌.ಪ್ರಕಾಶ್‌ ನೇತೃತ್ವದಲ್ಲಿ ಹಮ್ಮಿಕೊಂಡಿರುವ “ಬಿಜೆಪಿ ನಡಿಗೆ ಅಭಿವೃದ್ಧಿ ಕಡೆಗೆ’ ಪ್ರಚಾರ ಅಭಿಯಾನಕ್ಕೆ ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಿಂದ ಮಾಡಿದ ಸಾಧನೆಗಳನ್ನು ಇಡೀ ವಿಶ್ವವೇ ಅಚ್ಚರಿಯಿಂದ ನೋಡುತ್ತಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಏಕರೂಪದ ಸರಕು ಮತ್ತು ಸೇವಾ ತೆರಿಗೆ ಜಾರಿಯಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಸಹಿಸಿಕೊಳ್ಳಲು ಕಾಂಗ್ರೆಸ್‌ನವರಿಗೆ ಆಗುತ್ತಿಲ್ಲ. ಈ ಕಾರಣಕ್ಕಾಗಿ ಮೋದಿ ಅವರ ಪ್ರತಿ ಹೆಜ್ಜೆಯನ್ನು ಟೀಕಿಸುವ ಹೀನಾಯ ಸ್ಥಿತಿಗೆ ಕಾಂಗ್ರೆಸ್‌ ತಲುಪಿದೆ ಎಂದು ವ್ಯಂಗ್ಯವಾಡಿದರು.

ರಥಯಾತ್ರೆಗೆ ಚಾಲನೆ: ಕೇಂದ್ರದ ಎನ್‌ಡಿಎ ಸರ್ಕಾರ ಮತ್ತು ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಆಗಿರುವ ಅಭಿವೃದ್ಧಿ ಕೆಲಸಗಳು  ಸಾಧನೆಗಳ ಕುರಿತು ಜನರಿಗೆ ಮಾಹಿತಿ ನೀಡುವ ರಥಯಾತ್ರೆಗೆ ಯಡಿಯೂರಪ್ಪ ಚಾಲನೆ ನೀಡಿದರು. ಈ ರಥಯಾತ್ರೆ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ.

ವಿಸ್ತಾರಕ ಯೋಜನೆಗೆ 30 ಪದಾಧಿಕಾರಿಗಳು
ಬೆಂಗಳೂರು:
ಪಕ್ಷ ಸಂಘಟನೆಗಾಗಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ವಿಸ್ತಾರಕ ಯೋಜನೆಯಡಿ ಪಕ್ಷದ ಎಸ್‌ಸಿ ಮೋರ್ಚಾದ 30ಕ್ಕೂ ಹೆಚ್ಚು ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್‌.ವೀರಯ್ಯ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತಾರಕ ಯೋಜನೆಯಡಿ ಎಸ್‌ಸಿ ಮೋರ್ಚಾದ 30 ಪದಾಧಿಕಾರಿಗಳು ನಿಗದಿತ ಸ್ಥಳಗಳಲ್ಲಿ 15 ದಿನ ವಾಸ್ತವ್ಯ ಹೂಡಿ ಬೂತ್‌ ಮಟ್ಟದಲ್ಲಿ ಪಕ್ಷ ಮತ್ತು ಕಾರ್ಯಕರ್ತರ ಸಂಘಟನೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿಸಿದರು.

Advertisement

ಪಕ್ಷ ಮತ್ತು ಕಾರ್ಯಕರ್ತರ ಸಂಘಟನೆ ಜತೆಗೆ ವಿವಿಧ ಸಮಾಜದ ಮುಖಂಡರು, ಸಂಘ, ಸಂಸ್ಥೆಗಳ ಪದಾಧಿಕಾರಿಗಳನ್ನು ಭೇಟಿ ಮಾಡಲಾಗುವುದು. ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ
ಸಾಧನೆಗಳು ಮತ್ತು ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ
ಮನವರಿಕೆ ಮಾಡಿಕೊಡಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕೈಗೊಂಡಿರುವ ರಾಜ್ಯ ಪ್ರವಾಸ, ದಲಿತರ ಕೇರಿಗಳಿಗೆ ಭೇಟಿ ಮತ್ತು ಅಲ್ಲಿ ಉಪಾಹಾರ ಸೇವಿಸುವುದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ವಿರುದಟಛಿ ಹರಿಹಾಯ್ದ ವೀರಯ್ಯ, ದೇಶದಲ್ಲಿ 55 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ನೀಡಿದ ಕೊಡುಗೆಯಾದರೂ ಏನು? ಅವರ ಅವಧಿಯಲ್ಲಿ ದಲಿತರಿಗೆ ಭಿಕ್ಷೆ ನೀಡಿದಂತೆ ಹಂದಿ, ಕುರಿ, ಕೋಳಿಗಳನ್ನು ವಿತರಿಸಲಾಯಿತೇ ಹೊರತು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಯಾವುದೇ ಕಾರ್ಯಕ್ರಮ ರೂಪಿಸಲಿಲ್ಲ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next