Advertisement

Congress Election campaign; ಇಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ

11:26 PM Apr 22, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಚುನಾವಣ ಪ್ರಚಾರದ ಕೊನೆಯ ಹಂತ ತಲುಪುತ್ತಿರುವಂತೆ ಕಾಂಗ್ರೆಸ್‌ ತನ್ನ ಪ್ರಚಾರಕ್ಕೆ ಇನ್ನಷ್ಟು ಬಿರುಸು ನೀಡಲು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಳಸಿಕೊಳ್ಳಲಿದೆ.

Advertisement

ಅವರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ. ಎನ್‌. ಚಂದ್ರಪ್ಪ ಪರವಾಗಿ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಪ್ರಚಾರ ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಸಂಜೆ 6 ಗಂಟೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ರಣದೀಪ್‌ ಸಿಂಗ್‌ ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಚಿವ ರಾಮಲಿಂಗಾ ರೆಡ್ಡಿ ಭಾಗಿಯಾಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next