Advertisement

ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಇಂದು

07:30 AM Mar 14, 2018 | |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದ ಆಡಳಿತ ಪಕ್ಷ ಕಾಂಗ್ರೆಸ್‌ ಬುಧವಾರ ಅಭ್ಯರ್ಥಿಗಳ ಆಯ್ಕೆಗೆ ಚುನಾವಣಾ ಸಮಿತಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಆಕಾಂಕ್ಷಿಗಳ ಬಗ್ಗೆ ಇರುವ ಅಭಿಪ್ರಾಯ ಹಾಗೂ ಗೆಲ್ಲುವ
ಸಾಮರ್ಥ್ಯಗಳ ಕುರಿತು ಚರ್ಚೆ ನಡೆಯಲಿದೆ. ಕನಿಷ್ಠ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸುವ ಸಾಧ್ಯತೆ ಇದ್ದರೂ, ಯಾವುದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸದೇ ಪಟ್ಟಿ ಸಿದಟಛಿಪಡಿಸಿ ಸ್ಕ್ರೀನಿಂಗ್‌ ಕಮಿಟಿಗೆ ಕಳುಹಿಸಿಕೊಡಲಾಗುತ್ತದೆ.

Advertisement

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ನೇತೃತ್ವದಲ್ಲಿ 43 ಜನ ಸದಸ್ಯರಾಗಿರುವ ಸಮಿತಿ ಬೆಂಗಳೂರಿನ ಹೊರ ವಲಯದ 
ರೆಸಾರ್ಟ್‌ನಲ್ಲಿ ದಿನಪೂರ್ತಿ ಸಭೆ ನಡೆಸಲು ತೀರ್ಮಾನಿಸಿದೆ. ಸಮಿತಿಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌,
ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್‌, ಕಾರ್ಯಾ  ಧ್ಯಕ್ಷರಾದ ಎಸ್‌.ಆರ್‌. ಪಾಟೀಲ್‌, ದಿನೇಶ್‌ ಗುಂಡೂರಾವ್‌, ಹಿರಿಯ ನಾಯಕರಾದ
ಎಂ.ವೀರಪ್ಪ ಮೊಯ್ಲಿ, ಬಿ.ಕೆ. ಹರಿಪ್ರಸಾದ್‌, ಆಸ್ಕರ್‌ ಫ‌ರ್ನಾಂಡಿಸ್‌, ಮಾರ್ಗರೆಟ್‌ ಆಳ್ವಾ, ಕೆ.ಎಚ್‌. ಮುನಿಯಪ್ಪ ಸೇರಿ ಹಿರಿಯ ಸಚಿವರು, ಮಹಿಳಾ ಘಟಕ, ಯುವ ಘಟಕ, ಎನ್‌ಎಸ್‌ಯುಐ ಅಧ್ಯಕ್ಷರು, ರಾಜ್ಯದ ಸಂಸದರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಪಕ್ಷದ ವತಿಯಿಂದ ವೀಕ್ಷಕರನ್ನು ಕಳುಹಿಸಿ ಜಿಲ್ಲಾ ಹಾಗೂ ತಾಲೂಕು ಘಟಕಗಳಿಂದ ಟಿಕೆಟ್‌ ಆಕಾಂಕ್ಷಿಗಳ ಮಾಹಿತಿ
ಸಂಗ್ರಹಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಪ್ರತ್ಯೇಕ ಸಮೀಕ್ಷೆ ನಡೆಸಿದ್ದಾರೆ. ಗುಪ್ತಚರ ಇಲಾಖೆ ಮೂಲಕವೂ ಆಯಾ
ಕ್ಷೇತ್ರಗಳು ಹಾಗೂ ಆಕಾಂಕ್ಷಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದೆ. ಈಗಾಗಲೇ 224 ಕ್ಷೇತ್ರಗಳಿಗೆ 1,570ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಕೆಲವು ಕ್ಷೇತ್ರಗಳಿಗೆ 15ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಪ್ರತಿಯೊಬ್ಬ ಆಕಾಂಕ್ಷಿಯ ಬಗ್ಗೆ ಕ್ಷೇತ್ರದಲ್ಲಿ
ಇರುವ ಅಭಿಪ್ರಾಯ, ಜಾತಿ ಲೆಕ್ಕಾಚಾರ, ಹಿಂದಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಸೋಲಿನ ಅಂತರ, ಹಾಲಿ ಶಾಸಕರ ಬಗ್ಗೆ ಕ್ಷೇತ್ರದಲ್ಲಿರುವ ಅಭಿಪ್ರಾಯ, ಹೊಸ ಮುಖಗಳ ಬಗ್ಗೆ ಇರುವ ಮಾಹಿತಿ ಎಲ್ಲವೂ ಸಭೆಯಲ್ಲಿ ಚರ್ಚೆಯಾಗಲಿದೆ.

ಚುನಾವಣಾ ಪರಿಶೀಲನಾ ಸಮಿತಿ ಮುಂದೆ ಚರ್ಚೆ  ಇಂದಿನ ಸಭೆಯಲ್ಲಿ ಅಭ್ಯರ್ಥಿಗಳಿಗೆ ಇರುವ ಗೆಲ್ಲುವ ಶಕ್ತಿ ಹಾಗೂಅವರ ಬಗ್ಗೆ ಸಮೀಕ್ಷೆಗಳಲ್ಲಿ ಬಂದಿರುವ ಮಾಹಿತಿಯ ಬಗ್ಗೆ ಸಮಾಲೋಚನೆ ನಡೆಯಲಿದೆ. ನಂತರ ಮಾರ್ಚ್‌ 22ರಂದು ಎಐಸಿಸಿ 
ಪ್ರಧಾನ ಕಾರ್ಯದರ್ಶಿ ಮಧುಸೂಧನ್‌ ಮಿಸ್ತ್ರಿ ಅಧ್ಯಕ್ಷತೆಯ ಚುನಾವಣಾ ಪರಿಶೀಲನಾ ಸಮಿತಿ ಮುಂದೆ ಚರ್ಚೆಗೆ ಬರಲಿದೆ. ಅಂದಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಕೂಡ ಭಾಗಿಯಾಗಲಿದ್ದು, ಪ್ರಬಲ ಸ್ಪರ್ಧೆ ನೀಡುವ ಇಬ್ಬರು ಅಥವಾ ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next