Advertisement

ಜನರ ಹಿತ ಕಾಪಾಡುವಲ್ಲಿ ಕಾಂಗ್ರೆಸ್‌ ವಿಫಲ

02:16 PM Dec 23, 2017 | Team Udayavani |

ಸಿರಿಗೆರೆ: ಕಳೆದ ನಾಲ್ಕೂವರೆ ವರ್ಷಗಳ ಕಾಲ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಪಕ್ಷ ಜನರ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು,
ಜನವಿರೋಧಿ ಚಟುವಟಿಕೆಗಳನ್ನು ನಡೆಸುತ್ತಾ ಜನರ ಮಧ್ಯೆ ಜಾತಿಯ ವಿಷ ಬೀಜಗಳನ್ನು ಬಿತ್ತುವ ಕೆಲಸವನ್ನು ಸರ್ಕಾರವು ನಿರಂತರವಾಗಿ ಮಾಡುತ್ತಿದೆ ಎಂದು ಮಾಜಿ ಶಾಸಕ ಎಂ. ಚಂದ್ರಪ್ಪ ಹೇಳಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರು ನಡೆಸುತ್ತಿರುವ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯು ಹೊಳಲ್ಕೆರೆ ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿರಿಗೆರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತದ ಗದ್ದುಗೆಗೇರಲಿದೆ. ಬಿ.ಎಸ್‌. ಯಡಿಯೂರಪ್ಪ ಮತ್ತೂಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲರೂ ಏಕಮನಸ್ಸಿನಿಂದ ಸಹಕರಿಸಬೇಕು ಎಂದರು.

ಹೊಳಲ್ಕೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಚಟುವಟಿಕೆಗಳು ನಿಂತಿವೆ. ಯಾವೊಂದು ಕಾಮಗಾರಿಗಳೂ ಪೂರ್ಣವಾಗಿಲ್ಲ. ಚುನಾವಣೆಯು ಸಮೀಪಿಸುತ್ತಿರುವ
ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ ಅವುಗಳು ಯಾವುವು ಕಾರ್ಯಗತಗೊಳ್ಳುವುದಿಲ್ಲ ಎಂದು ಟೀಕಿಸಿದರು.
 ಚುನಾವಣೆಯ ಗಿಮಿಕ್‌ ಆಗಿ ಹಲವು ಯೋಜನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ
ಘೋಷಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರವು ಆಡಳಿತದಲ್ಲಿದ್ದಾಗ ಹೊಳಲ್ಕೆರೆಯ ಕ್ಷೇತ್ರದಲ್ಲಿ ಆಗಿರುವ ಕೆಲಸಗಳು ಕಣ್ಣಿಗೆ ಕಾಣುವಂತಿವೆ. ಮತದಾರರು ಅದನ್ನು ಅರಿತು ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು.

ಕರ್ನಾಟಕ ನವ ನಿರ್ಮಾಣ ಪರಿವರ್ತನಾ ಯಾತ್ರೆಯು ಜನವರಿ 10ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಮಾವೇಶಗೊಳ್ಳಲಿದೆ. ಬಿಜೆಪಿ ಮುಖಂಡರಾದ ಬಿ.ಎಸ್‌. ಯಡಿಯೂರಪ್ಪ, ಸಿ.ಟಿ. ರವಿ, ಕೆ.ಎಸ್‌. ಈಶ್ವರಪ್ಪ, ಶೋಭಾ ಕರಂದ್ಲಾಜೆ ಇತರರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಭಾಗದ 
ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗಿಯಾಗಬೇಕು ಎಂದು ಕರೆನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಭರಮಸಾಗರದ ಸಾಮಿಲ್‌ ಶಿವಣ್ಣ, ಬಿ. ಶರಣಪ್ಪ, ಓಬವ್ವನಾಗತಿಹಳ್ಳಿ ಮಂಜುನಾಥ್‌, ಕೊಳಹಾಳ್‌ ಶರಣಪ್ಪ, ಸಿರಿಗೆರೆ ಕೆ.ಎನ್‌. ಬಸವಂತಪ್ಪ, ಬಿ.ದುರ್ಗ ಮೋಹನ್‌, ಬಿಜೆಪಿ 
ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಬಿ. ಮೋಹನ್‌, ಗ್ರಾಪಂ ಸದಸ್ಯ ಎಂ. ಬಸವರಾಜಯ್ಯ, ಎ.ಎಲ್‌. ಪಂಚಾಕ್ಷರಯ್ಯ, ಅಳಗವಾಡಿ ಷಣ್ಮುಖಪ್ಪ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next