Advertisement

ಆರ್‌ಸಿಇಪಿ ಒಪ್ಪಂದದ ವಿರುದ್ಧ ಕಾಂಗ್ರೆಸ್‌ ಹೋರಾಟ

10:32 PM Nov 02, 2019 | Lakshmi GovindaRaju |

ಬೆಂಗಳೂರು: ಹಾಲಿನ ಉತ್ಪನ್ನಗಳಿಗೆ ಸುಂಕ ಇಲ್ಲದೆ ಆಮದು ಮಾಡಿಕೊಳ್ಳುವ ಆರ್‌ಸಿಇಪಿ ಒಪ್ಪಂದದ ವಿಚಾರ ದಲ್ಲಿ ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ಕತ್ತಲಲ್ಲಿ ಇಟ್ಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಆರ್‌ಸಿಇಪಿ ಒಪ್ಪಂದವನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಒಪ್ಪಂದಕ್ಕೆ ಸಹಿ ಹಾಕಿದರೆ ನಮ್ಮ ರಾಜ್ಯದ ರೈತರ ಸ್ಥಿತಿ ಕಷ್ಟಕರವಾಗುತ್ತದೆ ಎಂದು ವಿಷಾದಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ದಿಂದ ನೆರೆ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಎರಡೂ ಸರ್ಕಾರ ಗಳೂ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿಲ್ಲ.

Advertisement

ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ದೂರಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಆರ್‌ಸಿಇಪಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌಪ್ಯತೆ ಕಾಪಾಡುತ್ತಿದೆ. ನ.4 ರಂದು ಶೃಂಗ ಸಭೆ ನಡೆಯುತ್ತಿದೆ. ಆದರೆ, ಪ್ರತಿಪಕ್ಷಗಳ ಗಮನಕ್ಕೂ ಈ ವಿಚಾರವನ್ನು ತಂದಿಲ್ಲ. ಎಲ್ಲರನ್ನೂ ಕತ್ತಲಲ್ಲಿಟ್ಟು ನಿರ್ಧಾರಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರ ರೈತಾಪಿ ಸಮುದಾಯಕ್ಕೆ ಮಾರಕವಾಗುವ ಈ ಒಪ್ಪಂದಕ್ಕೆ ಸಹಿ ಹಾಕಿದರೆ ಕಾಂಗ್ರೆಸ್‌ ಉಗ್ರ ಹೋರಾಟ ಮಾಡಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next