Advertisement
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಕೇಂದ್ರದ ಉನ್ನತ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಗಂಟೆಗಳ ಮಾತುಕತೆಯ ನಂತರ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ.
Related Articles
Advertisement
ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ನೂತನ ಸಚಿವರ ಪಟ್ಟಿಯಲ್ಲಿ ಏಕೈಕ ಎಂಎಲ್‌ಸಿ ಎನ್‌ಎಸ್ ಬೋಸರಾಜು ಅವರ ಹೆಸರಿಗೂ ಅನುಮೋದನೆ ನೀಡಲಾಗಿದೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಕಳೆದ ಮೂರು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿದ್ದು, ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಮಂದಿ ಸಚಿವರಾಗಬಹುದು. ವಿಸ್ತೃತ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಲ್ವರು ಹೊಸ ಸಚಿವರು ಮತ್ತು ಒಕ್ಕಲಿಗ ಸಮುದಾಯದಿಂದ ಸಮಾನ ಸಂಖ್ಯೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ತಲಾ ಇಬ್ಬರು, ಮುಸ್ಲಿಂ ಸಮುದಾಯದಿಂದ ಒಬ್ಬರು, ಬ್ರಾಹ್ಮಣ ಮತ್ತು ಮಹಿಳೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.