Advertisement
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ. ಅನೇಕ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಿವೆ. ಅನೇಕ ಮಕ್ಕಳು ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ವಿಷಯ ಬಿಟ್ಟು ಭಾವನಾತ್ಮಕ ಸಂಗತಿಯನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ರಾಜ್ಯ ಬಜೆಟ್‌ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಿಸಿದ್ದೇವೆ ಎಂದರು.
Related Articles
ಮಂಗಳೂರಿನ ಶಾಲೆಯ ವಿವಾದದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿಯವರು ಪ್ರತಿ ಭಟನೆ ಮಾಡುತ್ತಿರಲಿ. ಕಾನೂ ನಿನ ಪ್ರಕಾರ ಕ್ರಮ ಕೈಗೊಳ್ಳ ಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದರು.
Advertisement
ಎಚ್‌ಡಿಕೆ ನಿಂತರೆ ಸ್ವಾಗತಡಿ.ಕೆ. ಸುರೇಶ್ ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ| ಮಂಜು ನಾಥ್ ಅವರನ್ನು ನಿಲ್ಲಿಸುವ ಬಗ್ಗೆ ಚರ್ಚೆ ನಡೆಯುತ್ತಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, “ನಾನು ದೇವೇಗೌಡರು, ಕುಮಾರಸ್ವಾಮಿ ವಿರುದ್ಧವೂ ಸ್ಪರ್ಧಿಸಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕುಮಾರ ಸ್ವಾಮಿ ಅವರ ಪತ್ನಿ ಯನ್ನು ನಿಲ್ಲಿಸಿ ದಾಗ ಅವರ ವಿರುದ್ಧ ನನ್ನ ತಮ್ಮ ಸ್ಪರ್ಧಿಸಿದ್ದರು. ಆಗಲೂ ಗೆದ್ದಿದ್ದೆವು. ಈಗ ಕುಮಾರಸ್ವಾಮಿ ಬಂದು ನಿಂತರೂ ಸ್ವಾಗತ’ ಎಂದರು. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಡಿಕೆಶಿ ಕಿವಿಮಾತು
ಮಂಗಳೂರು: ಮಂಗಳೂರು ಹಾಗೂ ಉಡುಪಿಯ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ ಕಳೆದುಕೊಳ್ಳ ಬಾರದು. ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಮತದಾರರು ಲೋಕಸಭಾ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಲಿದ್ದಾರೆ ಎನ್ನುವುದನ್ನು ಮರೆಯಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಮ್ಮ ಗ್ಯಾರಂಟಿ ಯೋಜನೆಗಳಿಂದ ಕರಾವಳಿ, ಮಲೆನಾಡಿನ ಮಹಿಳೆಯರು ಪಕ್ಷದ ಕೈ ಹಿಡಿಯಲಿದ್ದಾರೆ. ನಾವು ರಾಜ್ಯದ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ವಿಶ್ವಾಸವಿದೆ ಎಂದರು. ಪ್ರಧಾನಮಂತ್ರಿಯವರು 370 ಸೀಟು ಗೆಲ್ಲುತ್ತೇವೆ ಎನ್ನಬಹುದು. ಆದರೆ ಅದು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಜನರೂ ದೇಶದ ನಾಯಕತ್ವ ಬದಲಾವಣೆ ಮಾಡುವ ಚಿಂತನೆಯಲ್ಲಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅ ಧಿಕಾರಕ್ಕೆ ಬಂದಿದೆ. ಕಾರ್ಯಕರ್ತರು ತಮಗೆ ಸಿಕ್ಕ ಅವಕಾಶದಲ್ಲಿ ಮನೆ ಮನೆಗೆ ಹೋಗಿ ಪಕ್ಷದ ಸಂಘಟನೆ ಮಾಡಬೇಕು. ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರÂ, ಸಂವಿಧಾನ, ತ್ರಿವರ್ಣ ಧ್ವಜವನ್ನು ಕೊಟ್ಟಿದೆ. ನೀವು ಹಳ್ಳಿ ಹಳ್ಳಿಗೆ ಹೋಗಿ ಈ ಪಕ್ಷಕ್ಕೆ ಹೆಚ್ಚಿನ ಸೀಟು ಗೆಲ್ಲುವಂತೆ ಮಾಡಬೇಕು. ನಾವು ಸೋಲುವುದಿಲ್ಲ ಎಂಬ ಆತ್ಮವಿಶ್ವಾಸದಿಂದ ಸಂಘಟನೆ ಮಾಡಿ. ಈ ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು. ನಾನು 1985ರ ಚುನಾವಣೆಯಲ್ಲಿ ಸೋತಿದ್ದಾಗ ಪೂಜಾರಿ ಅವರನ್ನು ಕರೆದುಕೊಂಡು ಹೋಗಿ ಕನಕಪುರದಲ್ಲಿ ಸಾಲಮೇಳ ಕಾರ್ಯಕ್ರಮ ಮಾಡಿದೆ. ಅದರ ಪರಿಣಾಮವಾಗಿ ಜಿ.ಪಂ. ಸದಸ್ಯನಾದೆ. ಅನಂತರ ಇಲ್ಲಿವರೆಗೂ ಶಾಸಕನಾಗಿದ್ದೇನೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಕಪ್ಪುಹಣ ತಂದು 15 ಲಕ್ಷ ರೂ. ನೀಡುವುದಾಗಿ ಹೇಳಿದ್ದರು. ಎಲ್ಲ ರೈತರ ಆದಾಯ ಡಬಲ್ ಮಾಡುತ್ತೇವೆ, ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರು ಹೇಳಿದ್ದನ್ನು ಮಾಡಲಿಲ್ಲ. ಆದರೆ ನಮ್ಮ ಸರಕಾರ ನುಡಿದಂತೆ ನಡೆದಿದೆ. ದೇಶದಲ್ಲಿ ಯಾವುದೇ ಸರಕಾರ ಈ ರೀತಿ ಯೋಜನೆಗಳನ್ನು ಜಾರಿ ಮಾಡಲು ಇದುವರೆಗೆ ಸಾಧ್ಯವಾಗಿಲ್ಲ ಎಂದರು. ಮಾಜಿ ಸಚಿವ ವೀರಪ್ಪ ಮೊಲಿ ಮಾತನಾಡಿ, ಮೋದಿಯಿಂದ ದೇಶದಲ್ಲಿ ಉಸಿರುಗಟ್ಟುವ ಆಡಳಿತ ಇದೆ. ಅವರು ಹೋಗುವ ದಾರಿ ನೋಡಿದರೆ ಧರ್ಮವನ್ನು ಅವನತಿಯತ್ತ ಕೊಂಡೊಯ್ಯು ತ್ತಿದ್ದಾರೆ, ಸರ್ವಾಧಿಕಾರಿ ಧೋರಣೆ ತಳೆದಿದ್ದಾರೆ. ಈ ಸಂವಿಧಾನ ಆಶಯ ಉಳಿಸಲು ಮುಂದಾಗಬೇಕು. ಕರಾವಳಿಯಿಂದ ಬಿಜೆಪಿ ತೊಲಗಿದರೆ ದೇಶದಿಂದಲೂ ಹೋಗಲಿದೆ. ಕಾಂಗ್ರೆಸ್ ಇಲ್ಲಿ ಗೆದ್ದರೆ ಎಲ್ಲ ಕಡೆ ಗೆಲ್ಲಲಿದೆ ಎಂದು ಹೇಳಿದರು. ಗೃಹ ಸಚಿವ ಡಾ| ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಚಿವರಾದ ದಿನೇಶ್ ಗುಂಡೂರಾವ್, ವಿ. ಮುನಿಯಪ್ಪ, ಮಂಕಾಳ ವೈದ್ಯ, ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ಜೆ. ಜಾರ್ಜ್, ಮಧು ಬಂಗಾರಪ್ಪ, ಕೆ. ವೆಂಕಟೇಶ್, ಶಾಸಕ ಆರ್.ವಿ. ದೇಶಪಾಂಡೆ, ಮಾಜಿ ಸಚಿವರಾದ ಮೋಟಮ್ಮ, ಟಿ.ಬಿ. ಜಯಚಂದ್ರ, ರಮಾನಾಥ ರೈ, ಅಭಯಚಂದ್ರ ಜೈನ್, ಆಂಜನೇಯ, ವಿಧಾನ ಪರಿಷತ್ ಸದಸ್ಯರಾದ ಡಾ| ಮಂಜುನಾಥ ಭಂಡಾರಿ, ಬಿ.ಕೆ. ಹರಿಪ್ರಸಾದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಅಖೀಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕ ಅಶೋಕ್ ರೈ, ಹಿರಿಯ ಮುಖಂಡರಾದ ವಿನಯ ಕುಮಾರ್ ಸೊರಕೆ, ಶಕುಂತಳಾ ಶೆಟ್ಟಿ, ಗಫೂರ್, ಐವನ್ ಡಿ’ಸೋಜಾ, ಮಿಥುನ್ ರೈ, ನಾಸಿರ್ ಹುಸೇನ್, ಬಿ. ಪದ್ಮರಾಜ್, ಪಿ.ವಿ. ಮೋಹನ್, ನಾಗೇಂದ್ರ, ಮಾಜಿ ಸಂಸದ ಚಂದ್ರಪ್ಪ, ಮಿಥುನ್ ರೈ, ನವೀನ್ ಡಿ’ಸೋಜಾ, ಭಾಸ್ಕರ ಕೆ., ವಿನಯರಾಜ್ ಮುಂತಾದವರಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ವಾಗತಿಸಿದರು. ಮಮತಾ ಗಟ್ಟಿ ನಿರೂಪಿಸಿದರು. ಡಿಕೆಶಿ ಇಂದು ಮತ್ತೆ ಮಂಗಳೂರಿಗೆ
ಮಂಗಳೂರು: ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಶನಿವಾರ ಆಗಮಿಸಿ ಬೆಂಗಳೂರಿಗೆ ತೆರಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೆ. 18ರಂದು ಮತ್ತೆ ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ, ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುವ ಕರ್ಣಾಟಕ ಬ್ಯಾಂಕಿನ ಶತಮಾನೋತ್ಸವ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 7.30ಕ್ಕೆ ವಿಶೇಷ ವಿಮಾನದಲ್ಲಿ ಮರಳಲಿದ್ದಾರೆ.