Advertisement

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

11:47 PM Nov 21, 2024 | Team Udayavani |

ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದು 18 ತಿಂಗಳಾಗಿದೆ. ವಿವಿಧ ಹಗರಣಗಳಿಗೆ ಸಂಬಂಧಿ ಸಿದಂತೆ ಈವರೆಗೆ 18 ಎಸ್‌ಐಟಿ ರಚನೆ ಮಾಡಲಾಗಿದೆ. ಆ ಮೂಲಕ ಪ್ರಸ್ತುತ ಸರಕಾರ ಅಘೋಷಿತ ಕಾನೂನು ಮಾಡಿಕೊಂಡಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Advertisement

ಕದ್ದ ಮಾಲು ವಾಪಸ್‌ ಕೊಡುವುದು ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಕದ್ದ ಮಾಲು ವಾಪಸ್‌ ಕೊಟ್ಟಿದ್ದಾರೆ. ಈಗ ಬಡವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ಹೊರಟಿದ್ದಾರೆ. ಪ್ರತಿಯೊಂದರ ಬೆಲೆ ಏರಿಕೆ ಮಾಡುತ್ತಿದ್ದು, ಶೌಚಾಲಯಗಳಿಗೂ ಇನ್ನು ಮುಂದೆ ತೆರಿಗೆ ಹಾಕಿದರೂ ಹಾಕಬಹುದು ಎಂದು ಲೇವಡಿ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next