Advertisement
ಈಗಾಗಲೇ ಹೈಕಮಾಂಡ್‌ಗೆ ಎರಡೂ ಕಡೆಯಿಂದ ದೂರು ಹೋಗಿದೆ. ದಿಲ್ಲಿಯಲ್ಲಿ ನಾಯಕ ರಾಹುಲ್ ಗಾಂಧಿಗೆ ಸಿಎಂ ದೂರಿತ್ತರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಡಿಕೆಶಿ ದೂರು ನೀಡಿ ಬಂದಿದ್ದಾರೆ. ಈ ಬೆನ್ನಲ್ಲೇ ಡಿಕೆಶಿ ಕರೆದಿರುವ ಸಭೆ ಜಟಾಪಟಿಗೆ ಕಾರಣವಾಗಲಿದೆ ಎಂದೇ ಹೇಳಲಾಗುತ್ತಿದೆ.
Related Articles
Advertisement
ಮುಂದಿನ ಚುನಾವಣೆಗಳ ಬಗ್ಗೆಯೂ ಚರ್ಚೆ?ಉಪ ಮುಖ್ಯಮಂತ್ರಿಯೂ ಆದ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಾ ಧ್ಯಕ್ಷರು, ಉಪಾಧ್ಯಕ್ಷರು ಭಾಗ ವಹಿಸ ಲಿದ್ದಾರೆ. ಪಕ್ಷದ ಸಂಘಟನೆ, ಬರುವ ಉಪ ಚುನಾವಣೆ, ಸ್ಥಳೀಯ ಸಂಸ್ಥೆ ಗಳ ಚುನಾವಣೆ ಸೇರಿದಂತೆ ವಿವಿಧ ವಿಷಯ ಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಪರಾಮರ್ಶೆ, ಪಂಚಾಯತ್ ಚುನಾವಣೆಗೆ ಪಕ್ಷ ಸಂಘಟನೆ, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದು ದಿಢೀರ್ ಕರೆದ ಸಭೆ ಅಲ್ಲ, ಕಳೆದ ವಾರವೇ ಇದರ ಸೂಚನೆ ಹೋಗಿತ್ತು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಸೋಮವಾರ ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆದಿರುವುದು ಕುತೂಹಲ ಮೂಡಿ ಸಿದೆ. ಸಭೆ ಬಳಿಕ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತ ನಾಡಲಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗ ತಿಳಿಸಿದೆ. ಸಿಎಂ ಬಣಕ್ಕೆ ಸಂದೇಶ?
ಸಿದ್ದರಾಮಯ್ಯ ಬಣಕ್ಕೆ ಸಂದೇಶ ರವಾನಿಸಲು ಈ ಸಭೆ ಕರೆಯ ಲಾಗಿದೆ. ಹೆಚ್ಚುವರಿ ಡಿಸಿಎಂ, ಅಧ್ಯ ಕ್ಷರ ಬದಲಾವಣೆ ವಿಚಾರವಾಗಿ ಸಭೆ ಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳು ವಂತೆ ಡಿಕೆಶಿ ಆಪ್ತರಿಂದ ಒತ್ತಡ ಇದೆ ಎನ್ನಲಾಗಿದೆ. ಖರ್ಗೆಗೆ ಡಿಕೆಶಿ ದೂರು?
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಹೆಚ್ಚಾಗುತ್ತಲೇ ಇದೆ. ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದರೆ, ಅತ್ತ ಸಿಎಂ ಬಣವು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದರ ಭಾಗವಾಗಿ ಶನಿವಾರವಷ್ಟೇ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿಎಂ ಬಣ ಕೆಲವು ದೂರುಗಳನ್ನು ಅವರ ಕಿವಿಗೆ ಹಾಕಿ ಬಂದಿದೆ ಎಂದು ಹೇಳಲಾಗಿದೆ. ರವಿವಾರ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ತಮ್ಮ ಕಡೆಯ ವಾದ-ದೂರನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ದಿಲ್ಲಿಯಲ್ಲಿ ರವಿವಾರ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದೊಳಗೆ ನಡೆಯುತ್ತಿರುವ ಇತ್ತೀಚೆಗಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಅಲ್ಲದೆ ತಮ್ಮ ವಿರುದ್ಧ ನಡೆಯುತ್ತಿರುವ ಮಸಲತ್ತುಗಳೇನು, ಸಿಎಂ ಬಣದವರು ಹೂಡುತ್ತಿರುವ ಕಾರ್ಯತಂತ್ರಗಳೇನು, ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಆಗುವ ಘಾಸಿ ಏನು ಎಂಬಿತ್ಯಾದಿ ವಿಷಯಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ.