Advertisement
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿದಿನ ಒಂದೊಂದು ಇಲಾಖೆ ಅವ್ಯವಹಾರಗಳು ಹೊರ ಬರುತ್ತಿದೆ ಎಂದು ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಲಿ:
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮೂಡಾದಲ್ಲಿ ಹಗರಣ ಮಾಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಮೂಡಾ ಪ್ರಕರಣದ ಎಲ್ಲಾ ಫೈಲ್‌ಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕುತ್ತಾರೆ. ಹೀಗಾಗಿಯೇ, ದೇಸಾಯಿ ಕಮಿಟಿಯನ್ನು ಮಾಡಿದ್ದಾರೆ. ಕೆಂಪಣ್ಣ ಕಮಿಟಿ ಮಾಡಿದ್ರು ಅದು ಏನಾಯ್ತು…? ಗೊತ್ತಿಲ್ಲ. ಆ ಕಮಿಟಿಯ ರಿಪೊರ್ಟ್ ಬಹಿರಂಗವೇ ಆಗಲಿಲ್ಲ. ಅದಕ್ಕಾಗಿಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಮತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ ಎಂದರು. ಸೋಮವಾರದಿಂದ ಬಜೆಟ್ ಅಧಿವೇಶನ:
ನಾನು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಸೋಮವಾರದಿಂದ ಮೋದಿ ನೇತೃತ್ವದ ಮೂರನೇ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಕೆಲಸ ಮಾಡುವ ಶಕ್ತಿ ಸಿಗಬೇಕು ಎಂಬ ಆಶಯದಿಂದ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.
ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಬಿಜೆಪಿ ಮುಖಂಡರು ಇದ್ದರು.