Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ಪೀಠದಲ್ಲಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೋರ್ಟ್ ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಹಲವಾರು ಕಾನೂನು ತಜ್ಞರು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಆದೇಶದ ಬಗ್ಗೆ ಮಾಧ್ಯಮಗಳಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಸುದ್ದಿ ಪ್ರಸಾರವಾಗಿದೆ. ಆದರೆ ಸಿಎಂ ಸಾಹೇಬರಿಗೆ ಕೋರ್ಟ್ ಆದೇಶದ ಪ್ರತಿಯೇ ಸಿಕ್ಕಿಲ್ಲವಂತೆ. ನಿಮ್ಮ ವಿರುದ್ಧ ಬಂದಿರುವ ಆದೇಶದ ಬಗ್ಗೆ ಮಾತನಾಡಿ ಎಂದರೆ ಜೆಡಿಎಸ್ ಮತ್ತು ಬಿಜೆಪಿ ಒಳಸಂಚು ಮಾಡಿವೆ, ಕುಮಾರಸ್ವಾಮಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಕೇಳುತ್ತಾರೆ ಎಂದು ಲೇವಡಿ ಮಾಡಿದರು.
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ನನ್ನ ರಾಜೀನಾಮೆ ಕೇಳಿದ್ದಾರೆ. ನನ್ನ ಮೇಲಿನ ಆರೋಪ ಮುಕ್ತವಾದ ಮೇಲೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದೇನೆ. ನಾನು ಪಲಾಯನವಾದಿ ಅಲ್ಲ ಎಂದ ಅವರು, ಕರ್ನಾಟಕದಲ್ಲಿರುವುದು ದರೋಡೆಕೋರರ ಸರಕಾರ. ಅವರು ಹಿಂದೆಯೂ ದರೋಡೆ ಮಾಡುತ್ತಿದ್ದರು. ಈಗಲೂ ಮಾಡುತ್ತಿದ್ದಾರೆ. ಕೇರಳದ ಬಸ್‌ನಲ್ಲಿ ಚಿನ್ನದ ವ್ಯಾಪಾರಿಯಿಂದ ಚಿನ್ನ ಲೂಟಿ ಮಾಡಿದ ನಿಮ್ಮ ಹಣೆಬರಹ ಮರೆತಿದ್ದಾರೆಯೇ ಎಂದು ಪ್ರಶ್ನಿಸಿದರು.