Advertisement
ಲೋಕಾಯುಕ್ತ ಕಚೇರಿಗೆ ಹಾಜರಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ನಾನೇನು ತಪ್ಪು ಮಾಡಿ ಇಲ್ಲಿಗೆ ಬಂದಿಲ್ಲ. ಸ್ವಯಂಪ್ರೇರಿತವಾಗಿ ಬಂದಿದ್ದೇನೆ. ಶನಿವಾರ ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆ ಮಾಡುತ್ತೇನೆ. ಇವರ ಆಡಳಿತದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಹೇಗೆ ಕೆಲಸ ಮಾಡುತ್ತಿದೆ? ಎಂಬುದು ಶನಿವಾರ ಗೊತ್ತಾಗಲಿದೆ ಎಂದರು.
ಬಿಜೆಪಿ ಸರ್ಕಾರ, ನರೇಂದ್ರ ಮೋದಿ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾವ ನೈತಿಕತೆ ಇಟ್ಟುಕೊಂಡಿದ್ದಾರೆ. ಕುಮಾರಸ್ವಾಮಿ ಏಕೆ ರಾಜಿನಾಮೆ ಕೊಟ್ಟಿಲ್ಲ ಎಂದು ಸಾವಿರ ಬಾರಿ ಹೇಳಿರಬಹುದು. ನಾನು ಏಕೆ ರಾಜಿನಾಮೆ ಕೊಡಬೇಕು. ನಾನು ಏನು ಮಾಡಿದ್ದೇನೆ. ಬಂಡತನದಲ್ಲಿ ಸರ್ಕಾರದ ಆಸ್ತಿ ಲೂಟಿ ಮಾಡಿರುವುದು ನೀವು. ನಾನು ಏನೂ ತಪ್ಪೇ ಮಾಡಿಲ್ಲ ಎಂದು ಬಂಡತನದಲ್ಲಿ ಹೊರಟಿದ್ದೀರಿ. ನಾನು ಜಾಮೀನು ತೆಗೆದುಕೊಂಡಿದ್ದೇನೆ. ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕೆಂದು ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ಕುಮಾರಸ್ವಾಮಿ ಕೆಣಕಿದ ನಿಮ್ಮ ದು ಪಾರದರ್ಶಕ ಆಡಳಿತವೇ ಎಂದು ಪ್ರಶ್ನಿಸಿದರು.