Advertisement

ರಾಜ್ಯದ ಕಾಂಗ್ರೆಸ್‌ ಸರಕಾರ ಸಂಪೂರ್ಣ ದಿವಾಳಿ: ಮಾಜಿ ಸಿಎಂ ಯಡಿಯೂರಪ್ಪ

12:13 AM Apr 08, 2024 | Team Udayavani |

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ- ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಲೋಕಸಭಾ ಕ್ಷೇತ್ರದ ಮತದಾರ ರೊಂದಿಗೆ ಅರಮನೆ ಮೈದಾನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ಪುಕ್ಕಟೆ ಕಾರ್ಯ ಕ್ರಮಗಳನ್ನು ಘೋಷಿಸಿ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಬಹುಶಃ ಇದನ್ನು ಸುಧಾರಿಸಲು ನಮಗೆ 10 ವರ್ಷ ಬೇಕಾಗಬಹುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಯವರು ಶೀಘ್ರವೇ ಮತ್ತೂಮ್ಮೆ ಬರಲಿದ್ದು, ರೋಡ್‌ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಬರಗಾಲವಿದೆ. ಕುಡಿಯುವ ನೀರಿನ ತೀವ್ರ ಹಾಹಾಕಾರ ಬೆಂಗಳೂರಿನಲ್ಲಿದೆ. ಕಿಸಾನ್‌ ಸಮ್ಮಾನ್‌ ಅಡಿ ಕೇಂದ್ರದ 6 ಸಾವಿರದ ಜತೆಗೆ ನಾನು 4 ಸಾವಿರ ಕೊಡುತ್ತಿದ್ದೆ. ಈಗ 4 ಸಾವಿರ ಕೊಡುವುದು ನಿಲ್ಲಿಸಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆ, ಸೈಕಲ್‌ ವಿತರಣೆಯೂ ನಿಂತಿದೆ ಎಂದು ಆಕ್ಷೇಪಿಸಿದರು.

ದಿವಾಳಿ ಅಂಚಿನಲ್ಲಿರುವ ಈ ಸರಕಾರ ಇನ್ನೆಷ್ಟು ದಿನ ಅಧಿಕಾರದಲ್ಲಿ ಮುಂದುವರೆಯು ತ್ತದೆಯೋ ಗೊತ್ತಿಲ್ಲ. ನಾನು ಆ ಬಗ್ಗೆ ಮಾತ ನಾಡುವುದಿಲ್ಲ. ಲೋಕಸಭಾ ಚುನಾ ವಣೆ ಯಲ್ಲಿ ಎಲ್ಲ 28 ಕ್ಷೇತ್ರ ಗಳನ್ನು ಗೆದ್ದ ಬಳಿಕ ಆ ಬಗ್ಗೆ ಮಾತಾಡೋಣ ಎಂದಷ್ಟೇ ಹೇಳಿದರು.

Advertisement

ಅಭಿವೃದ್ಧಿಗಾಗಿ ಬಿಜೆಪಿಗೆ ಮತ
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಮಾತನಾಡಿ, ಅಭಿವೃದ್ಧಿಪರ ಆಡಳಿತಕ್ಕಾಗಿ ಮೋದಿಯವರಿಗೆ ಹಾಗೂ ಬಿಜೆಪಿಗೆ ಮತ ನೀಡಲು ವಿನಂತಿಸಿದರು. ಇದು ಅನಿವಾರ್ಯ ಮತ್ತು ಇಂದಿನ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಉಡುಪಿ- ಚಿಕ್ಕಮಗಳೂರಿನ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡದ ಅಭ್ಯರ್ಥಿ ಬ್ರಿಜೇಶ್‌ ಚೌಟ, ಶಾಸಕರಾದ ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next