Advertisement

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

10:04 PM Dec 22, 2024 | Team Udayavani |

ಬೆಂಗಳೂರು: ರಾಜ್ಯವನ್ನು ಅಭಿವೃದ್ಧಿ ಶೂನ್ಯವಾಗಿಸಿರುವ ಕಾಂಗ್ರೆಸ್‌ ಸರ್ಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

Advertisement

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕಲಾವಿದ, ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ  ಮುಖ್ಯಮಂತ್ರಿ ಚಂದ್ರು  ಕನ್ನಡ ಶಾಲೆಗಳು ಶಿಕ್ಷಕರು, ಸೌಕರ್ಯಗಳಿಲ್ಲದೆ ಮುಚ್ಚುವ ಸ್ಥಿತಿ ತಲುಪಿವೆ. ಈ ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಕನ್ನಡತನ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಭಾಷಣದ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಮುಖ್ಯಮಂತ್ರಿ ಚಂದ್ರು ಹೇಳಿದ್ದೇನು?
ಮುಖ್ಯಮಂತ್ರಿ, ಸರಕಾರದ ವಿರುದ್ಧ ಸಚಿವರ ಮುಂದೆ ವಾಗ್ದಾಳಿ: 

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ಮುಖವಾಡ ಕಳಚಿ ಬಿದ್ದಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ, ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಸರಕಾರದ ಬಳಿ ಏನೇನೂ ಉಳಿದಿಲ್ಲ. ಇವರಿಂದ ಕನ್ನಡತನ ಹೇಗೆ ಉಳಿಯಲು ಸಾಧ್ಯ? ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.

ಈ ಸರಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ, ಶಿಕ್ಷಕರಿಗಂತೂ ಕೆಲಸ ಇಲ್ಲವೇ ಇಲ್ಲ ಎಂಬ ವಾಸ್ತವ ಪರಿಸ್ಥಿತಿಯನ್ನು ಬಿಚ್ಚಿಡಲಾಗಿದೆ. ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ರಾಜ್ಯವಾಗಿಸಿರುವ ಕಾಂಗ್ರೆಸ್‌ ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ದೂರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next