Advertisement
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕಲಾವಿದ, ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕನ್ನಡ ಶಾಲೆಗಳು ಶಿಕ್ಷಕರು, ಸೌಕರ್ಯಗಳಿಲ್ಲದೆ ಮುಚ್ಚುವ ಸ್ಥಿತಿ ತಲುಪಿವೆ. ಈ ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಕನ್ನಡತನ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಭಾಷಣದ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.ಮುಖ್ಯಮಂತ್ರಿ ಚಂದ್ರು ಹೇಳಿದ್ದೇನು?
ಮುಖ್ಯಮಂತ್ರಿ, ಸರಕಾರದ ವಿರುದ್ಧ ಸಚಿವರ ಮುಂದೆ ವಾಗ್ದಾಳಿ:
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮುಖವಾಡ ಕಳಚಿ ಬಿದ್ದಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ, ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಸರಕಾರದ ಬಳಿ ಏನೇನೂ ಉಳಿದಿಲ್ಲ. ಇವರಿಂದ ಕನ್ನಡತನ ಹೇಗೆ ಉಳಿಯಲು ಸಾಧ್ಯ? ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.