Advertisement

Congress government; ವೈಫ‌ಲ್ಯಗಳನ್ನು ಮುಚ್ಚಿಕೊಳ್ಳಲು ದೆಹಲಿ ಬೀದಿನಾಟಕ: ಅಶೋಕ್‌

09:53 PM Feb 05, 2024 | Team Udayavani |

ಬೆಂಗಳೂರು: ತನ್ನ ಸಾಲು ಸಾಲು ವೈಫ‌ಲ್ಯಗಳಿಂದ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳÇÉೇ ಜನಪ್ರಿಯತೆ ಕಳೆದುಕೊಂಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಈಗ ಜನರ ಗಮನ ಬೇರೆಡೆ ಸೆಳೆಯಲು ದೆಹಲಿಯಲ್ಲಿ ಪ್ರತಿಭಟನೆಯ ಬೀದಿನಾಟಕ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಕಳೆದ ಒಂಬತ್ತು ತಿಂಗಳಿಂದ ಅಭಿವೃದ್ಧಿಗೆ ನಯಾ ಪೈಸೆಯೂ ಬಿಡುಗಡೆ ಮಾಡದ ಕಾಂಗ್ರೆಸ್‌ ಸರ್ಕಾರ, ರೈತರಿಗೆ ಬರ ಪರಿಹಾರ ಕೊಡಲೂ ಸಹ ಹಣವಿಲ್ಲದಷ್ಟು ದಿವಾಳಿಯಾಗಿದೆ. ರಾಜ್ಯದ ಈ ದುಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ಅವೈಜ್ಞಾನಿಕ ನೀತಿಗಳು, ದುರಾಡಳಿತ ಕಾರಣವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ತಿರುಗೆಟು ನೀಡಿದರು.

14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬರುವ ತೆರಿಗೆ ಹಂಚಿಕೆ ಕಡಿಮೆ ಆಗಿದೆ ಅಂತ ಆರೋಪ ಮಾಡುವ ಸಿಎಂ ಸಿದ್ದರಾಮಯ್ಯನವರು 15ನೇ ಹಣಕಾಸು ಆಯೋಗದ ಸಮಿತಿ ತನ್ನ ತೆರಿಗೆ ಹಂಚಿಕೆ ಸೂತ್ರ ರೂಪಿಸುವಾಗ 2018ರಲ್ಲಿ ರಾಜ್ಯದಲ್ಲಿ ಅವರದೇ ಸರ್ಕಾರ ಇತ್ತು ಎಂಬುದನ್ನು ಮರೆತಿದ್ದಾರೆ.ನಿಜವಾಗಿಯೂ ರಾಜ್ಯದ ಬಗ್ಗೆ ಕಾಳಜಿ ಇದಿದ್ದರೆ, ರಾಜ್ಯಕ್ಕೆ ಉಂಟಾಗಬಹುದಾದ ನಷ್ಟದ ಬಗ್ಗೆ 2018ರಲ್ಲೇ ಆಯೋಗಕ್ಕೆ ಸರಿಯಾದ ಮಾಹಿತಿ ನೀಡಿ ಮನವರಿಕೆ ಮಾಡಿಕೊಡಬಹದಿತ್ತು ಎಂದು ಅಭಿಪ್ರಾಯಪಟ್ಟರು.

ಆದರೆ ಆಗ ಸುಮ್ಮನಿದ್ದ ಸಿದ್ದರಾಮಯ್ಯನವರು ಈಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಹಂಚಿಕೆ ಪಾಲು ಕಡಿಮೆಯಾಗಲು ಸಿದ್ದರಾಮಯ್ಯನವರ ಬೇಜವಾಬ್ದಾರಿಯೇ ನೇರ ಕಾರಣ ಹೊರತು ಬೇರೆ ಯಾರೂ ಅಲ್ಲ ಎಂದು ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next